ಇನ್ನೂ ನಾಲ್ಕು ತಿಂಗಳಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ : ಅಮಿತ್ ಶಾ -Vishwanews24
ಜಾರ್ಖಂಡ್ : ಅಯೋಧ್ಯೆಯಲ್ಲಿ ದೇಶದ ಜನತೆ ಬಹುನಿರೀಕ್ಷೆಯಿಂದ ಕಾದು ನೋಡುತ್ತಿರುವ ರಾಮಮಂದಿರವನ್ನು ಇನ್ನೂ ನಾಲ್ಕೇ ತಿಂಗಳಲ್ಲಿ ನಿರ್ಮಾಣವಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಘೋಷಣೆ ಮಾಡಿದ್ದಾರೆ.
ಇತ್ತೀಚಿಗೆ ಸುಪ್ರೀಂ ಕೋರ್ಟ್ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಬಗ್ಗೆ, ಬಾಬ್ರಿ ಮಸೀದಿ ನಿರ್ಮಾಣಕ್ಕೂ ಜಾಗ ನೀಡುವ ಬಗ್ಗೆ ಮಹತ್ವದ ಆದೇಶವನ್ನು ನೀಡಿತ್ತು. ಈ ತೀರ್ಪಿನಿಂದಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ಲ ಸಿಕ್ಕಿತ್ತು.
ಈ ಕುರಿತಂತೆ ಜಾರ್ಖಂಡ್ ಚುನಾವಣೆಯ ಪ್ರಚಾರದ ವೇಳೆ ಮಾತನಾಡಿದ ಕೇಂದ್ರ ಗೃಹಸಚಿವ ಅಮಿತ್ ಶಾ, ಇನ್ನೂ ನಾಲ್ಕು ತಿಂಗಳಲ್ಲಿಯೇ ಅಯೋಧ್ಯೆಯಲ್ಲಿ ಮುಗಿಲೆತ್ತರದ ರಾಮ ಮಂದಿರವನ್ನು ನಿರ್ಮಾಣ ಮಾಡಲಾಗುತ್ತದೆ ಎಂಬುದಾಗಿ ಘೋಷಣೆ ಮಾಡಿದ್ದಾರೆ.
