ಇನ್ನೊಂದು ವಾರದಲ್ಲಿ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ : ಲಕ್ಷ್ಮೀ ಹೆಬ್ಬಾಳ್ಕರ್ – vishwanews24
ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯ : ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು, ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿದ್ದುದರಿಂದಾಗಿ ಹಣ ಸಂದಾಯವಾಗಲು ಸ್ವಲ್ಪ ವಿಳಂಬ ಆಯಿತು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಸಚಿವರು ತಿಳಿಸಿದರು.
ಅಪಘಾತದಲ್ಲಿ ಬೀದರ್ ಯಾತ್ರಿಕರ ದುರ್ಮರಣ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಖಂಡ್ರೆ – vishwanews24
ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ವಿರೋಧ ಪಕ್ಷದವರಿಗೆ ಮಾತನಾಡುವುದನ್ನು ಬಿಟ್ಟರೆ ಬೇರೇನೂ ಬರುವುದಿಲ್ಲ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗುತ್ತದೆ ಎಂದು ಹೇಳಿಕೊಂಡು ನಮ್ಮ ಯೋಜನೆಗಳನ್ನೇ ಕಾಪಿ ಮಾಡಿಕೊಂಡು ಬಿಜೆಪಿಯವರು ಬೇರೆ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದರು ಎಂದು ಹೇಳಿದರು.
ಭೀಕರ ರಸ್ತೆ ಅಪಘಾತ : ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ 5 ಮಂದಿ ಸಾವು – vishwanews24
