ಇನ್ಮುಂದೆ 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ -Vishwanews24
ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ಸಾಲಿನಿಂದಲೇ 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶುಕ್ರವಾರ ಪ್ರಕಟಣೆಯಲ್ಲಿ ಘೋಷಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶ್ನೆಗಳನ್ನು ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ತಯಾರಿಸಲಿದೆ. ಆದರೆ, ಮೌಲ್ಯಮಾಪನಗಳನ್ನು ಜಿಲ್ಲಾ ಮಟ್ಟದಲ್ಲಿ ನಡೆಸಲಾಗುವುದು ಎಂದರು.
ಮಕ್ಕಳನ್ನು 10ನೇ ತರಗತಿವರೆಗೆ ಫೇಲ್ ಮಾಡದೇ ಇದ್ದರೆ ಮಕ್ಕಳ ಶೈಕ್ಷಣಿಕ ಗುಣಮಟ್ಟಕ್ಕೆ ಹೊಡೆತ ಬೀಳುತ್ತದೆ. ಹೀಗಾಗಿ ಈ ವರ್ಷದಿಂದಲೇ 7ನೇ ತರಗತಿ ಪಬ್ಲಿಕ್ ಪರೀಕ್ಷೆ ಜಾರಿಗೆ ತರಲು ನಿರ್ಧಾರ ಮಾಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದಿಂದಲೇ ಮಕ್ಕಳನ್ನು ಪಬ್ಲಿಕ್ ಪರೀಕ್ಷೆಗೆ ತಯಾರುಗೊಳಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
