ಇನ್ಮುಂದೆ ಆ.23  ರಾಷ್ಟ್ರೀಯ ಬಾಹ್ಯಾಕಾಶ ದಿನ: ಮೋದಿ ಘೋಷಣೆ – Vishwanews24

Featured, ರಾಜ್ಯ ನ್ಯೂಸ್

ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ದಿನದ ನೆನಪಿಗಾಗಿ  ಇನ್ಮುಂದೆ ಆ.23  ರಾಷ್ಟ್ರೀಯ ಬಾಹ್ಯಾಕಾಶ ದಿನ: ಮೋದಿ ಘೋಷಣೆ

ಬೆಂಗಳೂರು: ಚಂದ್ರಯಾನ-3  ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ದಿನದ ನೆನಪಿಗಾಗಿ ಆ.23ನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ  ಚಂದ್ರಯಾನ-3 ರ ಯಶಸ್ಸಿಗೆ ಕಾರಣರಾದ ಇಸ್ರೋ (ISRO) ವಿಜ್ಞಾನಿಗಳನ್ನು ಅಭಿನಂದಿಸಿ ಮಾತನಾಡಿದರು. ಇದೇ ವೇಳೆ ಮತ್ತೆರಡು ವಿಶೇಷ ಘೋಷಣೆಗಳನ್ನು ಮಾಡಿದ್ದಾರೆ. ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಜಾಗಕ್ಕೆ ಶಿವಶಕ್ತಿ ಎಂದು ಹಾಗೂ ಚಂದ್ರಯಾನ -2 ಪತನವಾದ ಜಾಗಕ್ಕೆ ತಿರಂಗ ಎಂಬ ಹೆಸರನ್ನು ಮೋದಿ ಇಟ್ಟಿದ್ದಾರೆ.

ಉಡುಪಿ : ಮಲ್ಪೆ ಬೀಚ್‌ಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚು ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ – Vishwanews24

ಚಂದ್ರಯಾನ-3ರ ಯಶಸ್ಸಿನಿಂದಾಗಿ ಸ್ಥಳೀಯ ಉತ್ಪಾದನೆಗಳ ಶಕ್ತಿ ಪ್ರದರ್ಶನವಾಗಿದೆ. ಇದರಿಂದ ಮೇಕ್ ಇನ್ ಇಂಡಿಯಾ ಕಾರ್ಯಕ್ರಮವನ್ನು ಉತ್ತೇಜಿಸಲು ಸಹಕಾರಿಯಾಗಿದೆ. ಅಲ್ಲದೇ ಮಹಿಳಾ ವಿಜ್ಞಾನಿಗಳು ಚಂದ್ರಯಾನ-3 ರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಚಂದ್ರಯಾನ-3 ಮಿಷನ್‍ನ ಯಶಸ್ಸಿನ ಬಳಿಕ ಖಾಸಗಿ ಬಾಹ್ಯಾಕಾಶ ಉಡಾವಣೆಗಳು ಮತ್ತು ಸಂಬಂಧಿತ ಉಪಗ್ರಹ ಆಧಾರಿತ ವ್ಯವಹಾರಗಳಲ್ಲಿ ಹೂಡಿಕೆಯನ್ನು ಉತ್ತೇಜಿಸಲಿದೆ. ಈ ಮೂಲಕ ಕೇಂದ್ರದ ಮಹತ್ವಾಕಾಂಕ್ಷೆಯ ಮೇಕ್ ಇನ್ ಇಂಡಿಯಾ ಕಾರ್ಯಕ್ರಮವನ್ನು ಉತ್ತೇಜಿಸುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಉಡುಪಿ : ಮಲ್ಪೆ ಬೀಚ್‌ಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚು ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ – Vishwanews24

Leave a Reply