ಈ ಬಾರಿ ಮತ್ತೆ ಸಚಿವೆ ಶೋಭಾ ಕರಂದ್ಲಾಜೆ ಅವರೇ ಅಭ್ಯರ್ಥಿ , ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತಾರೆ : ಬಿ.ಎಸ್. ಯಡಿಯೂರಪ್ಪ ಭವಿಷ್ಯ – Vishwanews24

Featured, ಉಡುಪಿ

ಈ ಬಾರಿ ಮತ್ತೆ ಸಚಿವೆ ಶೋಭಾ ಕರಂದ್ಲಾಜೆ ಅವರೇ ಅಭ್ಯರ್ಥಿ , ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತಾರೆ : ಬಿ.ಎಸ್. ಯಡಿಯೂರಪ್ಪ ಭವಿಷ್ಯ

ಶೋಭಾ ಕರಂದ್ಲಾಜೆ ವಿರುದ್ಧದ ಪಿತೂರಿ ಅದೊಂದು ಷಡ್ಯಂತ್ರ : ಸಂಸದೆ ಶೋಭಾ ಕರಂದ್ಲಾಜೆ ಗೆ ಬಿಎಸ್ ವೈ ಸಪೋರ್ಟ್

ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಗಲಾಟೆಗಳಿಗೆ ಇದೀಗ ಬಿ.ಎಸ್ ಯಡಿಯೂರಪ್ಪ ಪುಲ್ ಸ್ಟಾಪ್ ಇಟ್ಟಿದ್ದು, ಈ ಬಾರಿ ಮತ್ತೆ ಸಂಸದೆ ಹಾಗೂ ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರೇ ಅಭ್ಯರ್ಥಿ, ಅಲ್ಲದೆ ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

ಚಿಕ್ಕಮಗಳೂರು ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಸೇರಿ ಹಲವರು ಭಾಗಿಯಾಗಿದ್ದು, ಶೋಭಾ ಗೋಬ್ಯಾಕ್ ಅಭಿಯಾನದ ಬಗ್ಗೆ ಮಾಹಿತಿ ಪಡೆದುಕೊಂಡರು.ಈ ವೇಳೆ ಮಾತನಾಡಿದ ಯಡಿಯೂರಪ್ಪ, ಇಂಥ ಅಭಿಯಾನಕ್ಕೆ ಹೆದರಬೇಕಿಲ್ಲ. ಶೋಭಾ ಕರಂದ್ಲಾಜೆ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಇದು ಷಡ್ಯಂತ್ರದ ಒಂದು ಭಾಗವಾಗಿದೆ. ಇನ್ನು ಮೂರು ದಿನದ ಒಳಗೆ ಎಲ್ಲವೂ ಗೊತ್ತಾಗುತ್ತೆ. 3 ದಿನದಲ್ಲಿ ಮೊದಲ ಪಟ್ಟಿ ಬಿಡುಗಡೆ ಆಗಬಹುದು. ಶೋಭಾ ಕರಂದ್ಲಾಜೆ ಮೋದಿ ಸಂಪುಟದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಈ ಬಾರಿಯೂ ಶೋಭಾ ಕರಂದ್ಲಾಜೆ ಗೆಲ್ಲುತ್ತಾರೆ ಎಂದು ಹೇಳಿದರು. ಈ ಮೂಲಕ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಉಡುಪಿ-ಚಿಕ್ಕಮಗಳೂರು ಟಿಕೆಟ್ ಎನ್ನುವುದನ್ನು ಖಚಿತಪಡಿಸಿದರು.

ನಾನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ  :  ಪ್ರಮೋದ್ ಮಧ್ವರಾಜ್ – Vishwanews24

Leave a Reply