ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ – vishwanews24

Featured, ರಾಜ್ಯ ನ್ಯೂಸ್

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ

ಮೈಸೂರು : ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ.

ದಸರಾ ಉದ್ಘಾಟನೆಗೆ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯರನ್ನು ಆಹ್ವಾನಿಸಲಾಗಿದ್ದು, ಅವರು ದಸರಾ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಮೈಸೂರಿನಲ್ಲಿ ತಯಾರಿ ಆರಂಭವಾಗಿದೆ. ಅಕ್ಟೋಬರ್ 3 ರಂದು ಮೈಸೂರು ದಸರಾಕ್ಕೆ ಚಾಲನೆ ದೊರೆಯಲಿದ್ದು, ಈಗಾಗಲೆ ಗಜಪಡೆ ತಾಲೀಮು ಆರಂಭವಾಗಿದೆ.

ತಿರುಪತಿ ಪ್ರಸಾದ ಪ್ರಕರಣ : ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನು ತಕ್ಷಣ ಪರೀಕ್ಷೆಗೊಳಪಡಿಸಿ : ಸರ್ಕಾರಕ್ಕೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಇನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹಂ.ಪ.ನಾಗರಾಜಯ್ಯ ಅವರು ಕನ್ನಡದ ಪ್ರಮುಖ ಭಾಷಾ ವಿಜ್ಞಾನಿ, ಸಂಶೋಧಕ. ‘ಹಂಪನಾ’ ಕಾವ್ಯನಾಮದಿಂದ ಬರೆಯುವ ನಾಗರಾಜಯ್ಯ ಅವರು, ಕನ್ನಡ ಸಾಹಿತ್ಯ ಲೋಕಕ್ಕೆ ಹಲವು ಮೌಲಿಕ ಕೃತಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

Leave a Reply