ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

Featured, ಉಡುಪಿ, ದಕ್ಷಿಣ ಕನ್ನಡ

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ

ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ ಮೀಲಾದುನ್ನೆಬಿ ಆಚರಿಸಲಾಗುತ್ತಿದೆ. ಹಾಗಾಗಿ ಸರಕಾರಿ ಸಾರ್ವತ್ರಿಕ ರಜೆಯನ್ನು ಆ.25ರಂದು ಘೋಷಿಸಿದೆ. ಅದರಂತೆ ಸರಕಾರಿ ಕಚೇರಿ, ಶಾಲಾ ಕಾಲೇಜ್‌ಗಳಿಗೆ ರಜೆ ಘೋಷಿಸಲಾಗಿದೆ.

ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಅವರು ಆದೇಶ ಹೊರಡಿಸಿದ್ದಾರೆ.

ಈದ್ ಮಿಲಾದ್ ಹಬ್ಬದ ಅಂಗವಾಗಿ ಆ.26ರಂದು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಿ ಈ ಹಿಂದೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿಗಳ ಕೋರಿಕೆಯ ಮೇರೆಗೆ, ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ರಜೆಯನ್ನು ಆ.25ಕ್ಕೆ ಬದಲಾಯಿಸಲು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಹೀಗಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ ಹಬ್ಬದ ಸಾರ್ವತ್ರಿಕ ರಜೆ ಆ.25ರಂದು ಇರಲಿದೆ.

Leave a Reply