ಉಚ್ಚಿಲ ದಸರಾ 2024 : ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸುತ್ತ ಏಕಕಾಲದಲ್ಲಿ ನಡೆದ ಸಾಮೂಹಿಕ ಕುಣಿತ ಭಜನೆ – vishwanews24
ಉಚ್ಚಿಲ ದಸರಾ 2024 : ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸುತ್ತ ಏಕಕಾಲದಲ್ಲಿ ನಡೆದ ಸಾಮೂಹಿಕ ವೈಭವದ ಕುಣಿತ ಭಜನೆ
ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ 3 ನೇ ವರ್ಷದ ಉಡುಪಿ ಉಚ್ಚಿಲ ದಸರಾ – 2024ರ ಅಂಗವಾಗಿ ಕ್ಷೇತ್ರದ ಪ್ರಾಂಗಣದ ಸುತ್ತ ನಡೆದ ಸಾಮೂಹಿಕ ಕುಣಿತ ಭಜನೆ ಭಕ್ತಿ ಭಾವದ ಪರಾಕಾಷ್ಠೆಗೆ ಸಾಕ್ಷಿಯಾಯಿತು
ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ರಥಬೀದಿಯ ಸುತ್ತಲೂ ಏಕಕಾಲದಲ್ಲಿ ನಡೆದ ಸಾಮೂಹಿಕ ಕುಣಿತ ಭಜನೆ ಕಾರ್ಯಕ್ರಮದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 50ಕ್ಕೂ ಅಧಿಕ ತಂಡಗಳಿಂದ ಸುಮಾರು ಎರಡು ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡರು. ದಸರಾ ರೂವಾರಿ ನಾಡೋಜ ಡಾ| ಜಿ. ಶಂಕರ್ ಅವರು ಭಜನೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ – vishwanews24
ಕ್ಷೇತ್ರದ ಪ್ರಧಾನ ಅರ್ಚಕ ವೇ| ಕೆ.ವಿ. ರಾಘವೇಂದ್ರ ಉಪಾಧ್ಯಾಯ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಪ್ರಮುಖರಾದ ವಾಸುದೇವ ಸಾಲ್ಯಾನ್, ಗುಂಡು ಅಮೀನ್ ಮೊದಲಾದವರಿದ್ದರು.
ಸುನೀಲ್ ಸಾಲ್ಯಾನ್ ಮುಕ್ಕ ಅವರ ನಿರ್ಹಹಣೆಯಲ್ಲಿ ಜರಗಿದ ಕುಣಿತ ಭಜನಾ ಕಾರ್ಯಕ್ರಮವು ಶಿಸ್ತುಬದ್ಧವಾಗಿ ನಡೆದಿದೆ. ಭಜನಾ ತಂಡಗಳನ್ನು ಪ್ರೋತ್ಸಾಹಿಸಿ ಗೌರವಿಸಲಾಯಿತು.
