ಉಜಿರೆ: ಹಿಂದೂ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ- ನಾಲ್ವರ ವಿರುದ್ಧ ದೂರು ದಾಖಲು – Vishwanews24

Featured, ದಕ್ಷಿಣ ಕನ್ನಡ

ಉಜಿರೆ: ಹಿಂದೂ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ- ನಾಲ್ವರ ವಿರುದ್ಧ ದೂರು ದಾಖಲು

ಉಜಿರೆ : ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪರಿಚಯಸ್ಥ ಹಿಂದೂ ಯುವತಿಯ ಜೊತೆ ಮಾತನಾಡಿದ್ದಕ್ಕೆ ಗ್ಯಾಂಗ್ ವೊಂದು ಮುಸ್ಲಿಂ ಯುವಕ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಉಜಿರೆ ಬಳಿ ಬಸ್‌ನಲ್ಲಿ ನಡೆದಿದೆ.

ಹಲ್ಲೆಗೊಳಗಾದ ಯುವಕನನ್ನು ಮೊಹಮ್ಮದ್ ಜಹೀರ್ (22) ಎಂದು ಗುರುತಿಸಲಾಗಿದೆ.

ಹಿಂದೂ ಯವತಿಯ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ -  themangaloremirror.in

ಗಾಯಗೊಂಡ ಯುವಕನನ್ನು ನಂತರ ಆಸ್ಪತ್ರೆಗೆ ದಾಖಲಿಸಲಾಯಿತು. ಯುವಕನ ದೂರಿನ ಆಧಾರದ ಮೇಲೆ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಸ್ಲಿಂ ಯುವಕ ಹಿಂದೂ ಯುವತಿಯೊಂದಿಗೆ ಮಾತನಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ನಂತರ ಹಿಂದೂ ಸಂಘಟನೆಯ ಕಾರ್ಯಕರ್ತರ ಗುಂಪು ಬಸ್‌ಗೆ ಏರಿತು. ಯುವಕನಿಗೆ ಥಳಿಸುವ ಮುನ್ನ ಆತನನ್ನು ಬಸ್‌ನಿಂದ ಕೆಳಗಿಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.

Leave a Reply