ಉಡುಪಿ: ಅ. 23ರಂದು ಎಸ್ಐಆರ್ ವಿರುದ್ಧ ಕಾಂಗ್ರೆಸ್ನಿಂದ ಬೃಹತ್ ಪ್ರತಿಭಟನೆ – vishwanews24
ಉಡುಪಿ: ಅ.23ರಂದು ಎಸ್ಐಆರ್ ವಿರುದ್ಧ ಬೃಹತ್ ಪ್ರತಿಭಟನೆ; ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಚರ್ಚೆ
ಉಡುಪಿ: ಕೇಂದ್ರ ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿರುದ್ಧ ಅಕ್ಟೋಬರ್ 23ರಂದು ಉಡುಪಿಯಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಚರ್ಚಿಸಲಾಯಿತು.
ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಅಕ್ಟೋಬರ್ 18ರಂದು ನಡೆದ ಸಭೆಯು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರ ಮಾರ್ಗದರ್ಶನದಲ್ಲಿ ನಡೆಯಿತು.
ಕೊಣಾಜೆ : ದ್ವಿಚಕ್ರ ವಾಹನಕ್ಕೆ ಪಿಕಪ್ ಢಿಕ್ಕಿ ಪ್ರಕರಣ ; ಇಬ್ಬರು ಸವಾರರು ಮೃತ್ಯು – vishwanews24
ಕೇಂದ್ರ ಚುನಾವಣಾ ಆಯೋಗ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ನೀತಿಗಳನ್ನು ಖಂಡಿಸಿ, ಸಹಬಾಳ್ವೆ ಸೇರಿದಂತೆ ವಿವಿಧ ಸಹಭಾಗಿ ಸಂಘಟನೆಗಳ ಬೆಂಬಲದೊಂದಿಗೆ ಅಕ್ಟೋಬರ್ 23ರಂದು ಪ್ರತಿಭಟನೆ ನಡೆಯಲಿದೆ. ಅಜ್ಜರಕಾಡಿನ ಗಾಂಧಿ ಪ್ರತಿಮೆ ಬಳಿಯಿಂದ ಸರ್ವಿಸ್ ಬಸ್ ನಿಲ್ದಾಣದವರೆಗೆ ಪಾದಯಾತ್ರೆ ನಡೆಸಿ, ಬಳಿಕ ಸಾರ್ವಜನಿಕ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ. ಇದರಲ್ಲಿ ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಭೆಯಲ್ಲಿ ಮನವಿ ಮಾಡಲಾಯಿತು.
ಈಗಾಗಲೇ ನಡೆಯುತ್ತಿರುವ ಭಾರತ್ ಜೋಡೋ ಯುವ ಸಂಘದ ಸದಸ್ಯತ್ವ ಅಭಿಯಾನವನ್ನು ಮತ್ತಷ್ಟು ಚುರುಕುಗೊಳಿಸುವಂತೆ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ನಾಯಕರಿಗೆ ಸೂಚಿಸಲಾಯಿತು. ಅಕ್ಟೋಬರ್ 29ರಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಯ ಬಡ ರೋಗಿಗಳ ಸಹಾಯಾರ್ಥ ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸುವ ಬಗ್ಗೆಯೂ ಚರ್ಚಿಸಲಾಯಿತು.
ಉಡುಪಿ- ಉಚ್ಚಿಲ ದಸರಾ ಶೋಭಾಯಾತ್ರೆ : ವಾಹನ ಸಂಚಾರಕ್ಕೆ ಬದಲಿ ಮಾರ್ಗ – vishwanews24
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಕೆಪಿಸಿಸಿ ಸದಸ್ಯ ದಿನೇಶ್ ಪುತ್ರನ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ ಹಾಗೂ ಪ್ರಮುಖರಾದ ಅಮೃತ್ ಶೆಣೈ ಅವರು ವಿವಿಧ ವಿಷಯಗಳ ಕುರಿತು ಸಲಹೆ ಮತ್ತು ಮಾರ್ಗದರ್ಶನ ನೀಡಿದರು.
ಜಿಲ್ಲಾ ಕಾಂಗ್ರೆಸ್ ಪ್ರಮುಖರು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
