ಉಡುಪಿ : ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ನೂತನ ಕಟ್ಟಡ ‘ಶ್ರೀ ಜನಾರ್ದನ ಮಂಟಪ’ ಉದ್ಘಾಟನೆ -Vishwanews24

Featured, ಉಡುಪಿ

ಉಡುಪಿ : ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ನೂತನ ಕಟ್ಟಡ ‘ಶ್ರೀ ಜನಾರ್ದನ ಮಂಟಪ’ ಉದ್ಘಾಟನೆ -Vishwanews24

ಉಡುಪಿ : ಅಂಬಲಪಾಡಿಯ ಶ್ರೀ ಲಕ್ಷ್ಮೀ  ಜನಾರ್ದನ ಯಕ್ಷಗಾನ ಕಲಾ ಮಂಡಳಿಯು ಸ್ವಂತ ನಿವೇಶನದಲ್ಲಿ ನೂತನವಾಗಿ ನಿರ್ಮಿಸಿದ ಕಛೇರಿ ಸಹಿತ ‘ಶ್ರೀ ಜನಾರ್ದನ ಮಂಟಪ’ದ ಉದ್ಘಾಟನಾ ಸಮಾರಂಭ ಅಂಬಲಪಾಡಿಯ ಕಂಬ್ಳಕಟ್ಟದಲ್ಲಿ ಮಾರ್ಚ್7 , 2021 ಭಾನುವಾರದಂದು ಸಂಜೆ 5.೦೦ ಗಂಟೆಗೆ ಜರಗಲಿದೆ.

ಸುಮಾರು ೫೦ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಟ್ಟಡವನ್ನು ನಾಡೋಜ ಡಾ. ಜಿ. ಶಂಕರ್‌ರ ಅಧ್ಯಕ್ಷತೆಯಲ್ಲಿ ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ನಿ.ಬೀ ವಿಜಯ ಬಲ್ಲಾಳರು ಉದ್ಘಾಟಿಸಲಿದ್ದಾರೆ. ಅಭ್ಯಾಗತರಾಗಿ ಉಡುಪಿಯ ಶಾಸಕ ಕೆ. ರಘುಪತಿ ಭಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀ ರೋಹಿತ್ ಎಚ್ ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೋಹಿಣಿ ಎಸ್. ಪೂಜಾರಿ ಭಾಗವಹಿಸಲಿದ್ದಾರೆ. ಬಳಿಕ ಪ್ರಶಸ್ತಿ ಪ್ರದಾನ ಮತ್ತು ಮಂಡಳಿಯ ಕಲಾವಿದರಿಂದ ‘ಶ್ವೇತಕುಮಾರ ಚರಿತ್ರೆ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಮಂಡಳಿಯ ಅಧ್ಯಕ್ಷ ಮುರಲಿ ಕಡೆಕಾರ್, ಕಾರ್ಯದರ್ಶಿ ಕೆ.ಜೆ ಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.