ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

Featured, ಉಡುಪಿ

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ

ಉಡುಪಿ : ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಇವರ ವತಿಯಿಂದ ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ನೂತನವಾಗಿ ಅಕ್ಕ ಕೆಫೆ ಪ್ರಾರಂಭಿಸಲು ಉದ್ದೇಶಿಸಲಾಗಿದ್ದು, ಕೆಫೆಯನ್ನು ಯಶಸ್ವಿಯಾಗಿ ನಿರ್ವಹಿಸುವ ಸಲುವಾಗಿ ಅರ್ಹ ಸ್ವ-ಸಹಾಯ ಗುಂಪುಗಳನ್ನು ಆಯ್ಕೆ ಮಾಡಲು ಏಪ್ರಿಲ್ 13 ರಂದು ಬೆಳಗ್ಗೆ 10 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಕಡ್ಡಾಯವಾಗಿ ಗ್ರಾಮೀಣ ಅಥವಾ ನಗರ ಸಂಜೀವಿನಿ ಸ್ವ-ಸಹಾಯ ಗುಂಪುಗಳಾಗಿರುವ, ಹೋಟೆಲ್ ಅಥವಾ ಕ್ಯಾಟರಿಂಗ್ ಉದ್ಯಮದಲ್ಲಿ ಅನುಭವ ಹೊಂದಿರುವ ಸ್ಥಳೀಯ ಸ್ವ-ಸಹಾಯ ಗುಂಪುಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಭಾಗವಹಿಸುವ ಸ್ವ-ಸಹಾಯ ಗುಂಪುಗಳು ತಾವು ತಯಾರಿಸುವ ಆಹಾರದ ಒಂದು ಮಾದರಿ ಮೆನು ಮತ್ತು ದರದ ಪಟ್ಟಿಯೊಂದಿಗೆ ಹಾಗೂ ತಮ್ಮ ಸಂಘದ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಸಮಯಕ್ಕೆ ಸಂದರ್ಶನಕ್ಕೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಅವಿನಾಶ್, ಸಂಜೀವಿನಿ ಯೋಜನೆಯ ಜಿಲ್ಲಾ ವ್ಯವಸ್ಥಾಪಕರು, ಮೊ.ನಂ: 9844234080 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್‌ನ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply