ಉಡುಪಿ: ಇಂದು 314 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ -Vishwanews24

Featured, ಉಡುಪಿ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶನಿವಾರ ಒಟ್ಟು 314 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5919 ಕ್ಕೆ ಏರಿಕೆಯಾಗಿದೆ.

ಶನಿವಾರ 1379 ವರದಿಗಳು ನೆಗೆಟಿವ್ ಬಂದಿದ್ದು, 314 ಪಾಸಿಟಿವ್ ಬಂದಿವೆ. 1540 ವರದಿಗಳು ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಇದುವರೆಗೂ 3347 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2512 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಶನಿವಾರ 5 ಮಂದಿ ಕೋವಿಡ್ ಸೋಂಕಿನಿಂದ ಮೃತರಾಗಿದ್ದು ಜಿಲ್ಲೆಯಲ್ಲಿ ಒಟ್ಟು ಸಾವನಪ್ಪಿದವರ ಸಂಖ್ಯೆ 60 ಕ್ಕೆ ಏರಿಕೆಯಾಗಿದೆ.