ಉಡುಪಿ : ಇಳಿಕೆಯತ್ತ ಕೋವಿಡ್  ; ಜಿಲ್ಲೆಯಲ್ಲಿ ಇಂದು 34 ಕೊರೋನ ಪಾಸಿಟಿವ್ ಪ್ರಕರಣ -Vishwanews24

Featured, ಉಡುಪಿ

ಉಡುಪಿ: ಇಳಿಕೆಯತ್ತ ಕೋವಿಡ್  ; ಜಿಲ್ಲೆಯಲ್ಲಿ ಇಂದು 34 ಕೊರೋನ ಪಾಸಿಟಿವ್ ಪ್ರಕರಣ -Vishwanews24

ಉಡುಪಿ :  ಜಿಲ್ಲೆಯಲ್ಲಿ ಇಂದು 34 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 18, ಕುಂದಾಪುರ 3, ಕಾರ್ಕಳ 12 ಹಾಗೂ ಹೊರ ಜಿಲ್ಲೆಯ ಓರ್ವರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,372 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ಇಂದು ಜಿಲ್ಲೆಯಲ್ಲಿ ಯಾರೂ ಕೂಡಾ ಕೋವಿಡ್ ನಿಂದ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ. ಜಿಲ್ಲೆಯಲ್ಲಿ ಈ ವರೆಗೆ 2ನೇ ಅಲೆಯಲ್ಲಿ ಒಟ್ಟು 268 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಸೆ.6ರಂದು ಜಿಲ್ಲೆಯಲ್ಲಿ 79 ಮಂದಿ ಸೋಂಕಿತರು ಗುಣಮುಖರಾಗಿದ್ದು,ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ 49,308 ಮಂದಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆಪತ್ತೆಯಾದ 74,559 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 72,729 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೋವಿಡ್ 2ನೇ ಅಲೆಯಲ್ಲಿ ಸೆ.6 ರ ವೇಳೆಗೆ ಜಿಲ್ಲೆಯಲ್ಲಿ 6,49,973 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 50,948 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ.