ಉಡುಪಿ: ಉಚಿತ ಹೆರಿಗೆ ಆಸ್ಪತ್ರೆಯ ನಿರ್ವಹಣೆ ಕೈಬಿಟ್ಟ ಬಿ.ಆರ್​.ಶೆಟ್ಟಿ- ಸಂಕಷ್ಟಕ್ಕೆ ಸಿಲುಕಿದ 250 ಸಿಬ್ಬಂದಿ  – Vishwanews24

Featured, ಉಡುಪಿ

ಉಡುಪಿ: ಉಚಿತ ಹೆರಿಗೆ ಆಸ್ಪತ್ರೆಯ ನಿರ್ವಹಣೆ ಕೈಬಿಟ್ಟ ಬಿ.ಆರ್​.ಶೆಟ್ಟಿ- ಸಂಕಷ್ಟಕ್ಕೆ ಸಿಲುಕಿದ 250 ಸಿಬ್ಬಂದಿ  – Vishwanews24

ಉಡುಪಿ: ಉಚಿತ ಹೆರಿಗೆಯ ಸರ್ಕಾರಿ ಆಸ್ಪತ್ರೆಯ ನಿರ್ವಹಣೆಯನ್ನು ಕೈಬಿಡುವುದಾಗಿ ಅಬುದಾಬಿಯ ಉದ್ಯಮಿ ಬಿ.ಆರ್. ಶೆಟ್ಟಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಉದ್ಯಮಿ ಬಿ.ಆರ್. ಶೆಟ್ಟಿ ಅವರು ಸರ್ಕಾರದ ಹೆರಿಗೆ ಆಸ್ಪತ್ರೆಯನ್ನು ತಾನು ನಡೆಸುತ್ತೇನೆ ಎಂದು ತಾನೇ ಮುಂದೆ ಬಂದಿದ್ದರು. ಹೀಗಾಗಿ 200 ಬೆಡ್​ನ ಉಚಿತ ಹೆರಿಗೆಯ ಸರ್ಕಾರಿ ಆಸ್ಪತ್ರೆಯನ್ನು ಖಾಸಗಿ ನಿರ್ವಹಣೆ ಮಾಡುವುದು ಮತ್ತು ಇದಕ್ಕೆ ಬದಲಾಗಿ 400 ಬೆಡ್​ನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ನೂರಾರು ಕೋಟಿ ಮೌಲ್ಯದ ಸರ್ಕಾರದ 4.7 ಎಕರೆ ಭೂಮಿಯನ್ನು ಬಿ.ಆರ್. ಶೆಟ್ಟಿ ಅವರಿಗೆ ಕೊಡುವುದು ಎಂದು ಎಂಓಯು ಆಗಿತ್ತು. ಆದರೆ ಈಗ ಆರ್ಥಿಕ ಸಂಕಷ್ಟದಲ್ಲಿ ಇರುವ ಅವರು, ಆಸ್ಪತ್ರೆ ನಡೆಸಲು ಸಾಧ್ಯವಿಲ್ಲ ಎಂದು ಸರ್ಕಾರಕ್ಕೆ ತಿಳಿಸಿದ್ದಾರೆ.

ಸೆಂಟ್ರಲ್ ಎಸಿ ಅಳವಡಿಸಿರುವ ಈ ಬಹುಮಹಡಿ ಕಟ್ಟಡವನ್ನು ಆರೋಗ್ಯ ಇಲಾಖೆಯಿಂದ ನಿರ್ವಹಿಸುವುದಕ್ಕೆ ಸಾಧ್ಯವೇ ಇಲ್ಲ. ಹೀಗಾಗಿ ಈ ಆಸ್ಪತ್ರೆಯ 250 ಸಿಬ್ಬಂದಿಗೆ ಈ ಸಂಬಳ ಕೊಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ.