ಉಡುಪಿ ಉದ್ಯಮಿ ಭಾಸ್ಕರ್‌ ಶೆಟ್ಟಿ ಕೊಲೆ ಪ್ರಕರಣ: ಪತ್ನಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌ – Vishwanews24

Featured, ರಾಜ್ಯ ನ್ಯೂಸ್

ಉಡುಪಿ ಉದ್ಯಮಿ ಭಾಸ್ಕರ್‌ ಶೆಟ್ಟಿ ಕೊಲೆ ಪ್ರಕರಣ: ಪತ್ನಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌ – Vishwanews24

ಬೆಂಗಳೂರು: ರಾಜ್ಯದ ಗಮನ ಸೆಳೆದಿದ್ದ ಉಡುಪಿಯ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಪತ್ನಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್‌ ಜಾಮೀನು ನೀಡಿದೆ.

ಉಡುಪಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆ ರದ್ದುಪಡಿಸಬೇಕು ಮತ್ತು ಅಧೀನ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ಅಮಾನತಿನಲ್ಲಿ ಇಟ್ಟು ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ರಾಜೇಶ್ವರಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಜಿ ನರೇಂದರ್ ಮತ್ತು ಇ ಎಸ್ ಇಂದಿರೇಶ್ ಅವರಿದ್ದ ವಿಭಾಗೀಯ ಪೀಠ ನಡೆಸಿತು.

ಮಧ್ಯಂತರ ಮನವಿ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್‌ ಮತ್ತು ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ವಿಭಾಗೀಯ ನ್ಯಾಯಪೀಠ ರಾಜೇಶ್ವರಿ ಶೆಟ್ಟಿ ಅವರಿಗೆ ವಿಧಿಸಿರುವ ಜಾಮೀನು ನೀಡಿ ಗುರುವಾರ ಆದೇಶಿಸಿದೆ.

2016ರ ಜುಲೈ 28ರಂದು ಉದ್ಯಮಿ ಇಂದ್ರಾಳಿಯ ಭಾಸ್ಕರ್ ಅವರನ್ನು ಭೀಕರವಾಗಿ ಕೊಲೆ ಮಾಡಿ ಶವವನ್ನು ಹೋಮಕುಂಡದಲ್ಲಿ ದಹಿಸಲಾಗಿತ್ತು. ಅವಶೇಷಗಳನ್ನು ಹತ್ತಿರದ ನದಿಗೆ ಎಸೆಯಲಾಗಿತ್ತು. ಅದೇ ತಿಂಗಳ 31ರಂದು ತಮ್ಮ ಮಗ ನಾಪತ್ತೆಯಾಗಿರುವ ಬಗ್ಗೆ ಭಾಸ್ಕರ್ ಅವರ ತಾಯಿ ಮಣಿಪಾಲ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಆಗಸ್ಟ್ ನಲ್ಲಿ ಆರೋಪಿಗಳನ್ನು ಬಂಧಿಸಿದ್ದರು.

ಉಡುಪಿ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉಡುಪಿ ಶ್ರೀ ಕೃಷ್ಣ ಮಠವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸುವ ಹುನ್ನಾರ ನಡೆಸಿತ್ತು : ಪ್ರಮೋದ್ ಮಧ್ವರಾಜ್ – Vishwanews24

Leave a Reply