ಉಡುಪಿ : ಉದ್ಯೋಗಕ್ಕೆ ತಕ್ಕಂತಹ ಕೌಶಲ್ಯ ಅಗತ್ಯ : ಡಾ. ಅಪ್ಪಾಜಿಗೌಡ -Vishwanews24

Featured, ಉಡುಪಿ

ಉಡುಪಿ : ಉದ್ಯೋಗಕ್ಕೆ ತಕ್ಕಂತಹ ಕೌಶಲ್ಯ ಅಗತ್ಯ : ಡಾ. ಅಪ್ಪಾಜಿಗೌಡ -Vishwanews24

ಉಡುಪಿ : ಉದ್ಯೋಗ ಆಕಾಂಕ್ಷಿಗಳು ತಮ್ಮ ಸಾಮರ್ಥ್ಯ, ಕೌಶಲ್ಯಗಳನ್ನು ಬೆಳೆಸಿಕೊಂಡು ಅಗತ್ಯವಾದ ಉದ್ಯೋಗಗಳನ್ನು ಪಡೆದುಕೊಳ್ಳಬೇಕು. ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಸ್ವ-ವಿಮರ್ಶೆ ಮಾಡಿಕೊಂಡು ಉದ್ಯೋಗಗಳಿಗೆ ತಕ್ಕಂತಹ ಕೌಶಲ್ಯಗಳನ್ನು ಕಲಿತುಕೊಳ್ಳಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ, ಪ್ರಾದೇಶಿಕ ಕಛೇರಿ ಮಂಗಳೂರು ವಲಯದ ಜಂಟಿ ನಿರ್ದೇಶಕ ಡಾ. ಅಪ್ಪಾಜಿಗೌಡ ಎಸ್.ಬಿ. ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಅವರು ಇತ್ತೀಚೆಗೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ಜಂಟಿ ಆಶ್ರಯದಲ್ಲಿ ರಾಷ್ಟಿçÃಯ ವೃತ್ತಿ ಸೇವಾ ಯೋಜನೆ ಅಡಿಯಲ್ಲಿ ನಡೆದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ಉಡುಪಿ:ಕೇರಳ ಮತ್ತು ಮುಂಬೈಯಿ0ದ ಬರುವವರಿಗೆ ಆರ್.ಟಿ.ಪಿ.ಸಿ.ಆರ್ ಕಡ್ಡಾಯ : ಸಂಸದೆ ಶೋಭಾ ಕರಂದ್ಲಾಜೆ-Vishwanews24

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಜಿಲ್ಲಾ ಉದ್ಯೋಗಾಧಿಕಾರಿ ಖಲಂದರ್‌ಖಾನ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯುವ ಜನರ ಕೌಶಲ್ಯಗಳನ್ನು ಹೆಚ್ಚಿಸಲು ಕೌಶಲ್ಯ ಕೇಂದ್ರಗಳನ್ನು ಸ್ಥಾಪಿಸಿದ್ದು, ವಿದ್ಯಾರ್ಥಿಗಳು ಅದರಲ್ಲಿ ನೋಂದಾಯಿಸಿಕೊ0ಡು ಪ್ರಯೋಜನ ಪಡೆದುಕೊಳ್ಳಬೇಕು.   ಉದ್ಯೋಗಾಕಾಂಕ್ಷಿಗಳು ಕೌಶಲ್ಯಗಳನ್ನು ಕಲಿತು ಉದ್ಯೋಗಗಳನ್ನು ಪಡೆದು ಭಾರತವನ್ನು ಜಗತ್ತಿನಲ್ಲಿ ಎತ್ತರಕ್ಕೆ ಕೊಂಡೊಯ್ಯಬೇಕೆ0ದರು.

ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಉದ್ಯೋಗ ಮೇಳಗಳಲ್ಲಿ ಭಾಗವಹಿಸಿ ಅದರ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕೆಂದರು.

ಉಡುಪಿ : ಪಾದೂರು ಐ.ಎಸ್.ಪಿ.ಆರ್.ಎಲ್ ವಿಸ್ತರಣೆ : ಸಂತ್ರಸ್ಥರಿಗೆ ಪರಿಷ್ಕೃತ ನಿಯಮಾವಳಿಯನ್ವಯ ಗರಿಷ್ಠ ಪರಿಹಾರ ನೀಡಿ : ಸಂಸದೆ ಶೋಭಾ -Vishwanews24

ಕಾರ್ಯಕ್ರಮದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ವಾಮನ ನಾಯಕ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಕೃಷ್ಣ ರಾವ್ ಕೊಡಂಚ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರುಗಳಾದ ದಯಾನಂದ ಶೆಟ್ಟಿ ಕೊಜಕುಳಿ, ಮಂಜುಳಾ ಪ್ರಸಾದ್, ಐಕ್ಯೂಎಸಿ ಸಂಚಾಲಕ ಡಾ. ಸುರೇಶ್ ರೈ ಕೆ. ಉಪಸ್ಥಿತರಿದ್ದರು. ಉದ್ಯೋಗ ಮಾಹಿತಿ ಘಟಕ ಸಂಚಾಲಕ ಡಾ. ವೆಂಕಟೇಶ ಹೆಚ್.ಕೆ. ಸ್ವಾಗತಿಸಿದರು.  ಆಂಗ್ಲಭಾಷಾ ವಿಭಾಗದ ಪ್ರೊ. ಉಮೇಶ್ ಪೈ ವಂದಿಸಿದರು. ಡಾ. ದುಗ್ಗಪ್ಪ ಕಜೆಕಾರ್ ಹಾಗೂ ಶರ್ಮಿಳಾ ಹಾರಾಡಿ ಕಾರ್ಯಕ್ರಮ ನಿರೂಪಿಸಿದರು. ಆಟೋಮೊಬೈಲ್ಸ್, ಬ್ಯಾಂಕಿ0ಗ್ ಮತ್ತು ಇನ್ಶೂರೆನ್ಸ್, ಇನ್‌ಫಾರ್ಮೆಷ್ನ್ ಟೆಕ್ನಾಲಜಿ ಮೊದಲಾದ ಕ್ಷೇತ್ರದ 17 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದರು.

ಉಡುಪಿ : ಫೆ. 24 ರಂದು6 ನೇ ತರಗತಿ ಪ್ರವೇಶ ಪರೀಕ್ಷೆ – ನಿಷೇಧಾಜ್ಞೆ ಜಾರಿ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24