ಉಡುಪಿ: ಎ.10ರಂದು ನೇರ ಸಂದರ್ಶನ – vishwanews24
ಉಡುಪಿ: ಎ.10ರಂದು ನೇರ ಸಂದರ್ಶನ
ಉಡುಪಿ: ನಗರದ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟವರ್ಸ್‌ನ ಹರ್ಷ ರೀಟೇಲ್ ಪ್ರೈ.ಲಿ ಇಲ್ಲಿ ಎಪ್ರಿಲ್ 10ರಂದು ಬೆಳಗ್ಗೆ 10:30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣ ರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್‌ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸ ಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ಮೊ. ನಂ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟನೆ ತಿಳಿಸಿದೆ.
