ಉಡುಪಿ : ಎಸ್.ಎಸ್.ಎಲ್.ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ -Vishwanews24

Featured, ಉಡುಪಿ

ಉಡುಪಿ : ಎಸ್.ಎಸ್.ಎಲ್.ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ -Vishwanews24

ಉಡುಪಿ,  : ಕರ್ನಾಟಕ ಪ್ರ‍್ರೌಢ ಶಿಕ್ಷಣ ಮಂಡಳಿಯ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 28 ರಿಂದ ಏಪ್ರಿಲ್ 11 ರ ವರೆಗೆ ಜಿಲ್ಲೆಯ ಒಟ್ಟು 58 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ, ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಹಾಗೂ ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಅಂಗಡಿಗಳನ್ನು , ಪರೀಕ್ಷೆಗಳು ನಡೆಯುವ ದಿನದಂದು ಬೆಳಗ್ಗೆ 8 ರಿಂದ ಸಂಜೆ 6 ರ ವರಗೆ ಮುಚ್ಚುವಂತೆ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

Leave a Reply