ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ – vishwanews24
ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ
ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ ಕಚೇರಿಯಲ್ಲಿ ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಿಸುವ ಕಾರ್ಯಕ್ರಮ ಮೋರ್ಚಾದ ಅಧ್ಯಕ್ಷ ಭುಜಂಗ ನಾಯ್ಕ ಇವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಕುತ್ಯಾರ್ ನವೀನ್ ಶೆಟ್ಟಿ ಇವರ ಉಪಸ್ಥಿತಿಯಲ್ಲಿ ನಡೆಯಿತು.
ಜಿಲ್ಲಾ ಪ್ರದಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುತ್ಯಾರು ನವೀನ್ ಶೆಟ್ಟಿ ಅವರು ಪದಾಧಿಕಾರಿಗಳ ಜವಾಬ್ದಾರಿಯ ಬಗ್ಗೆ ಮಾಹಿತಿ ನೀಡಿದರು. ಎಸ್.ಟಿ ಮೋರ್ಚಾದ ಪದಾಧಿಕಾರಿಗಳು ತಮ್ಮ ತಮ್ಮ ಪರಿಚಯ ಮಾಡಿಕೊಂಡ ಬಳಿಕ ನಿಯುಕ್ತಿ ಪತ್ರವನ್ನು ನೀಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಎಸ್.ಟಿ ಮೋರ್ಚಾದ ಅಧ್ಯಕ್ಷ ಭುಜಂಗ ನಾಯ್ಕ ಇವರು ಅಧ್ಯಕ್ಷೀಯ ಭಾಷಣದಲ್ಲಿ ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ ಜಿಲ್ಲಾಧ್ಯಕ್ಷರಿಗೆ ಧನ್ಯವಾದಗಳನ್ನು ತಿಳಿಸಿದರು.
ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24
ನೂತನವಾಗಿ ಆಯ್ಕೆಯಾದ ಮೋರ್ಚಾದ ಎಲ್ಲಾ ಪದಾಧಿಕಾರಿಗಳಿಗೂ, ಕಾರ್ಯಕಾರಿಣಿ ಸದಸ್ಯರಿಗೂ ಅಭಿನಂದನೆಗಳನ್ನುಸಲ್ಲಿಸಿದರು. ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ, ನಾಯಕ್, ಜಿಲ್ಲಾ ಕಾರ್ಯದರ್ಶಿ ಉಮೇಶ್ ಎ.ನಾಯ್ಕ ಚೇರ್ಕಾಡಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ನಾಯ್ಕ ನೂಜಿನ ಬೈಲ್, ಸುಭಾಷ್ ನಾಯ್ ಪೆರ್ಡೂರು ಉಪಸ್ಥಿತರಿದ್ದರು.
