ಉಡುಪಿ: ಕರಾವಳಿಗೆ ರೆಡ್ ಅಲರ್ಟ್ ಘೋಷಣೆ – ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ – vishwanews24
ಉಡುಪಿ: ಕರಾವಳಿಗೆ ರೆಡ್ ಅಲರ್ಟ್ ಘೋಷಣೆ – ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ
ಉಡುಪಿ: ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35ರಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಸಮುದ್ರ ಪ್ರಕ್ಷುಬ್ಧವಾಗಿರಲಿದೆ. ಆದುದರಿಂದ ರಾಜ್ಯದ ಮೂರು ಕರಾವಳಿ ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದರೊಂದಿಗೆ ಜೂ.22ರಿಂದ 24ರ ನಡುವಿನ ಅವಧಿಯಲ್ಲಿ ಸಾಧಾರಣದಿಂದ (64.5ಮಿ.ಮೀ- 115.5ಮಿ.ಮೀ.)ದಿಂದ ಭಾರೀ ಮಳೆ (115.5 ರಿಂದ 204.4ಮಿ.ಮೀ) ಮಳೆಯಾಗಲಿದ್ದು, ಕೆಲವು ಪ್ರದೇಶಗಳಲ್ಲಿ 204.4ಮಿ.ಮೀ.ಗಿಂತಲೂ ಅಧಿಕ ಮಳೆ ಬೀಳುವ ಸಾಧ್ಯತೆ ಇದ್ದು ರಾಜ್ಯ ಕರಾವಳಿಯಲ್ಲಿ ರೆಡ್ ಅಲರ್ಟ್ನ್ನು ಘೋಷಿಸಲಾಗಿದೆ ಎಂದು ಹಮಾಮಾನ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.
ನೀವೆಲ್ಲ ಸಾಯಲಿದ್ದೀರಿ ; ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ – vishwanews24
ಅಲ್ಲದೇ ಇಂದು ಸಂಜೆಯಿಂದ ಜೂ.21ರ ಮಧ್ಯರಾತ್ರಿ11:30ರವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಿಂದ ಮಂಗಳೂರಿನವರೆಗೆ, ಉಡುಪಿ ಜಿಲ್ಲೆಯ ಬೈಂದೂರಿನಿಂದ ಕಾಪುವಿನವರೆಗೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಮಜಲಿವರೆಗಿನ ಕಡಲಿನಲ್ಲಿ 2.0ಮೀ.ನಿಂದ 2.7ಮೀ.ವರೆಗಿನ ಎತ್ತರದ ಸಮುದ್ರದಲೆಗಳು ದಡವನ್ನು ಅಪ್ಪಳಿಸುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆ ತಿಳಿಸಿದೆ.
