ಉಡುಪಿ: ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡಿದರೆ ಬಿಜೆಪಿಯನ್ನು ಸೋಲಿಸುವುದು ಕಷ್ಟವೇನಲ್ಲ : ಪ್ರಮೋದ್ ಮಧ್ವರಾಜ್ -Vishwanews24
ಉಡುಪಿ: ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡಿದರೆ ಬಿಜೆಪಿಯನ್ನು ಸೋಲಿಸುವುದು ಕಷ್ಟವೇನಲ್ಲ : ಪ್ರಮೋದ್ ಮಧ್ವರಾಜ್ -Vishwanews24
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಉಡುಪಿ ಬ್ಲಾಕ್ ಕಾಂಗ್ರೆಸ್ ಸಭೆಯನ್ನು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿತ್ತು.
ಸಭೆಯಲ್ಲಿ ಮಾತನಾಡಿದ ಪ್ರಮೋದ್ ಮಧ್ವರಾಜ್ ಕಾರ್ಯಕರ್ತರನ್ನು ನಾನು ಸ್ವಲ್ಪ ನಿರ್ಲಕ್ಷ ಮಾಡಿದ್ದು ನಿಜ. ಆದರೆ ಜಿಲ್ಲೆಯಲ್ಲಿ ಕಾಂಗ್ರೆಸ್ಸನ್ನು ಬಲವಾಗಿ ಕಟ್ಟಲು ನಾನು ಸಾಕಷ್ಟು ಕೆಲಸ ಮಾಡಿದ್ದೇನೆ. ಮುಂದೆಯೂ ಮಾಡುತ್ತೇನೆ.
ಮುಖ್ಯವಾಗಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡಿದರೆ ಬಿಜೆಪಿಯನ್ನು ಸೋಲಿಸುವುದು ಕಷ್ಟವೇನಲ್ಲ.
ಎಲ್ಲ ಕಡೆಗಳಲ್ಲೂ ಅರ್ಹ ಸೂಕ್ತ ಕಾಂಗ್ರೆಸ್ ಅಭ್ಯರ್ಥಿಗಳನ್ನು ನಿಲ್ಲಿಸಬೇಕು. ಮನೆಮನೆಗೆ ತೆರಳಿ ಕಾರ್ಯಕರ್ತರು ನಮ್ಮ ಕಾರ್ಯಕ್ರಮಗಳನ್ನು ತಿಳಿಸಬೇಕು, ಈ ಮೂಲಕ ಪಂಚಾಯತ್ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದರು.
ಆದರೆ ಕಾಂಗ್ರೆಸ್ ಭವನದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮೊದಲಾದ ನಾಯಕರು ಗೈರುಹಾಜರಾಗಿದ್ದರು.
ಕಾಂಗ್ರೆಸ್ ಭವನದಲ್ಲಿ ನಡೆದ ಸಭೆಗೆ ಆಗಮಿಸಿದ ಪ್ರಮೋದ್ ಮಧ್ವರಾಜ್ ಕಾರ್ಯಕರ್ತರಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.
