ಉಡುಪಿ: ಕಾಂಗ್ರೆಸ್ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಜಾತಿ ನಿಂದನೆ : ಬಿಜೆಪಿ ರಾಷ್ಟ್ರೀಯ ಮಾಧ್ಯಮ ವಕ್ತಾರ ಸಂಬಿತ್ ಪಾತ್ರ ಅವರ ವಿರುದ್ದ ಯುವ ಕಾಂಗ್ರೆಸ್ ದೂರು -Vishwanews24
ಉಡುಪಿ: ಮಾಧ್ಯಮ ಸಂವಾದದಲ್ಲಿ ಕಾಂಗ್ರೆಸ್ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಜಾತಿ ನಿಂದನೆ ಮಾಡಿದ ಬಿಜೆಪಿಯ ರಾಷ್ಟ್ರೀಯ ಮಾದ್ಯಮ ವಕ್ತಾರರಾದ ಸಂಬಿತ್ ಪಾತ್ರ ಅವರ ವಿರುದ್ದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಉಡುಪಿ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ವಿಶ್ವಾಸ್.ವಿ.ಅಮೀನ್, ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ಕಾಂಗ್ರೆಸ್ ಉಡುಪಿ ಜಿಲ್ಲಾ ಹಿಂದುಳಿದ ವರ್ಗ ಘಟಕದ ಜಿಲ್ಲಾಧ್ಯಕ್ಷರಾದ ಯತೀಶ್ ಕರ್ಕೇರ, ಮಾಜಿ ನಗರಸಭಾ ಸದಸ್ಯರುಗಳಾದ ಗಣೇಶ್ ನೇರ್ಗಿ, ನಾರಾಯಣ ಕುಂದರ್ ಹಾಗೂ ರಮೇಶ್ ಪಾಲ್, ಹಮದ್ ಉಡುಪಿ, ಜಮೀರ್ ಉಪಸ್ಥಿತರಿದ್ದರು.
