ಉಡುಪಿ: ಕಾಂಗ್ರೆಸ್‌ ವಿತರಿಸುತ್ತಿರುವ ಗ್ಯಾರಂಟಿ ಕಾರ್ಡ್‌ಗಳಿಗೆ ಯಾವುದೇ ವಾರಂಟಿ ಇಲ್ಲ : ಕೋಟ ಶ್ರೀನಿವಾಸ ಪೂಜಾರಿ – Vishwanews24

Featured, ಉಡುಪಿ

ಉಡುಪಿ: ಕಾಂಗ್ರೆಸ್‌ ವಿತರಿಸುತ್ತಿರುವ ಗ್ಯಾರಂಟಿ ಕಾರ್ಡ್‌ಗಳಿಗೆ ಯಾವುದೇ ವಾರಂಟಿ ಇಲ್ಲ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಯಾವುದೇ ಸರಕಾರ ಬಡವರಿಗೆ ನ್ಯಾಯವನ್ನು ಕೊಡುತ್ತಿರುವಾಗ ಇಲ್ಲಿಯವರೆಗೆ ಗ್ಯಾರಂಟಿ ಕಾರ್ಡ್‌ನ್ನು ಕೊಟ್ಟಿಲ್ಲ. ಗ್ಯಾರಂಟಿ ಕಾರ್ಡ್‌ ಕೊಡುತ್ತೇವೆ ಎಂಬುದರ ಅರ್ಥವೇನೆಂದರೆ ಜನ ತಮ್ಮನ್ನು ನಂಬುವುದಿಲ್ಲ ಎಂಬುದಾಗಿದೆ. ಈ ಕಾರಣಕ್ಕಾಗಿ ಕಾಂಗ್ರೆಸ್‌ ವಿತರಿಸುತ್ತಿರುವ ಗ್ಯಾರಂಟಿ ಕಾರ್ಡ್‌ಗಳಿಗೆ ಯಾವುದೇ ವಾರಂಟಿ ಇಲ್ಲ ಎಂದು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೂದಲಿಸಿದ್ದಾರೆ.

ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಅಧ್ಯಕ್ಷತೆಯಲ್ಲಿಉಡುಪಿ ಪುರಭವನದಲ್ಲಿ ಭಾನುವಾರ ನಡೆದ ಚುನಾವಣಾ ನಿರ್ವಹಣಾ ಸಮಿತಿಯ ಜಿಲ್ಲಾಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಜಾರಿಗೆ ತಂದಿರುವ ಭಾಗ್ಯಲಕ್ಷ್ಮೀ, ಸಂಧ್ಯಾ ಸುರಕ್ಷಾ ಮುಂತಾದ ಜನಪರ ಯೋಜನೆಗಳಿಗೆ ಯಾವುದೇ ಗ್ಯಾರಂಟಿ ಕಾರ್ಡ್‌ ನೀಡಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಜಾರಿಗೆ ತಂದಿರುವ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ರೈತರ ಖಾತೆಗೆ ಕೇಂದ್ರದಿಂದ 6,000 ರೂ. ರಾಜ್ಯದಿಂದ 4,000 ರೂ. ನೇರ ನಗದು ವರ್ಗಾವಣೆ ಮಾಡುತ್ತಿರುವ ಬಗ್ಗೆ ಯಾವುದೇ ಗ್ಯಾರಂಟಿ ಕಾರ್ಡ್‌ ನೀಡಿಲ್ಲ. ಈ ಎಲ್ಲ ವಿಚಾರಗಳನ್ನು ಬಿಜೆಪಿ ಕಾರ್ಯಕರ್ತರು ಜನತೆಗೆ ಮನವರಿಕೆ ಮಾಡಬೇಕಾದ ಅವಶ್ಯಕತೆ ಇದೆ ಎಂದರು.

ನಂದಿನಿ ಉತ್ಪನ್ನಗಳನ್ನುಖರೀದಿಸಿ ಹಂಚುವ ಮೂಲಕ ಅಮುಲ್‌ ಉತ್ಪನ್ನಗಳಿಗೆ ವಿಭಿನ್ನವಾಗಿ ವಿರೋಧ ವ್ಯಕ್ತಪಡಿಸಿದ ಡಿಕೆಶಿ – Vishwanews24

Leave a Reply