ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ ಜಾಲದ ಪೈಪ್ಲೈನ್ ಬದಲಾವಣೆ ಮಾಡಿ ಕಾಂಕ್ರೀಟ್ ಛೇಂಬರ್ ನಿರ್ಮಾಣ ಕಾಮಗಾರಿಯನ್ನು ಅಕ್ಟೋಬರ್ 15 ರಿಂದ ಪ್ರಾರಂಭಿಸಲಾಗುತ್ತಿರುವ ಹಿನ್ನಲೆ ಸದರಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ, ಬದಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
