ಉಡುಪಿ: ಕಾರು ಡಿಕ್ಕಿ ಹೊಡೆದು ಯುವಕ ಮೃತ್ಯು -Vishwanews24

Featured, ಉಡುಪಿ

ಉಡುಪಿ : ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ 21 ವರ್ಷದ ವರ್ಷದ ಯುವಕ ಸಾವನ್ನಪ್ಪಿದ ಘಟನೆ ಆಗಸ್ಟ್ 3 ರ ಸೋಮವಾರ ಕುಂಬ್ರಗೋಡು ಎಂಬಲ್ಲಿ ನಡೆದಿದೆ.

ಮೃತ ಯುವಕನನ್ನು ಆಕಾಶ್ ಪೂಜಾರಿ (21) ಎಂದು ಗುರುತಿಸಲಾಗಿದ್ದು ಕುಂಬ್ರಗೋಡು ನಿವಾಸಿಯಾಗಿದ್ದು ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು.

ಕುಂದಾಪುರ-ಉಡುಪಿ ಹೆದ್ದಾರಿಯಲ್ಲಿ ರಸ್ತೆ ಬದಿಯಲ್ಲಿ ನಿಂತು ಆಕಾಶ್ ಮತ್ತು ಶರತ್ ಎಂಬವರು ಮಾತನಾಡುತ್ತಿದ್ದರು ಎಂದು ಹೇಳಲಾಗಿದ್ದು ಈ ಸಂದರ್ಭದಲ್ಲಿ ಉಡುಪಿಯಿಂದ ಕುಂದಾಪುರ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಸ್ವಿಫ್ಟ್ ಡಿಜೈರ್ ಕಾರು ಡಿವೈಡರ್‌ಗೆ ಗುದ್ದಿ ಪಲ್ಟಿ ಹೊಡೆದಿದ್ದು ಆಕಾಶ್‌ಗೆ ಡಿಕ್ಕಿ ಹೊಡೆದಿದೆ. ಶರತ್‌ನನ್ನು ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರೀತಮ್‌ ಎಂಬ ವ್ಯಕ್ತಿ ಕಾರು ಚಲಾಯಿಸುತ್ತಿದ್ದರು ಎಂದು ತಿಳಿದು ಬಂದಿದೆ.ಆಕಾಶ್‌ ಅನ್ನು ಕೂಡಾ ಮಹೇಶ್ ಆಸ್ಪತ್ರೆಗೆ ಕರೆತರಲಾಗಿದ್ದು ವೈದ್ಯರು ಈಗಾಗಲೇ ಆಕಾಶ್‌ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.