ಉಡುಪಿ: ಕಾರು ಢಿಕ್ಕಿ –  ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಸಾವು – vishwanews24

Featured, ಉಡುಪಿ

ಉಡುಪಿ: ಕಾರು ಢಿಕ್ಕಿ –  ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಸಾವು

ಉಡುಪಿ: ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಉಡುಪಿಯ ಶ್ರೀನಿವಾಸ (83) ನ.3ರಂದು ಸಾವನ್ನಪ್ಪಿದ್ದಾರೆ.

ನ. 2ರಂದು ಅಂಬಾಗಿಲು ಜಂಕ್ಷನ್‌ ಬಳಿ ಕಾರು ಚಾಲಕ ಮನೀಶ್‌ ಅವರು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಶ್ರೀನಿವಾಸ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದ್ದರು.

ತಲೆಗೆ ಗಂಭೀರ ಸ್ವರೂಪದ ಗಾಯವಾದ ಅವರನ್ನು ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫ‌ಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply