ಉಡುಪಿ : ಕುರಿಯ ಗಣಪತಿ ಶಾಸ್ತ್ರಿ ಗಳಿಗೆ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ’ ಪ್ರಶಸ್ತಿ – Vishwanews24
ಉಡುಪಿ : ಕುರಿಯ ಗಣಪತಿ ಶಾಸ್ತ್ರಿ ಗಳಿಗೆ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ’ ಪ್ರಶಸ್ತಿ – Vishwanews24
ಉಡುಪಿ : ಯತಿಶ್ರೇಷ್ಠರಾದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಹೆಸರಿನಲ್ಲಿ ಅವರ ಕರಕಮಲ ಸಂಜಾತ ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಅನುಗ್ರಹ ಪೂರ್ವಕವಾಗಿ ಕೊಡಮಾಡುವ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ’ಕ್ಕೆ ತೆಂಕುತಿಟ್ಟಿನಲ್ಲಿ ಮೂರು ದಶಕಗಳ ಕಾಲ ಭಾಗವತರಾಗಿ, ಅನುಭವಿ ರಂಗ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಶ್ರೀ ಕುರಿಯ ಗಣಪತಿ ಶಾಸ್ತಿçಗಳು ಆಯ್ಕೆಯಾಗಿದ್ದಾರೆ.
ತೆಂಕುತಿಟ್ಟು ಯಕ್ಷಗಾನದ ಗುರುಕುಲವೆಂದು ಮನ್ನಣೆ ಪಡೆದ ಕುರಿಯ ಮನೆತನದವರಾದ ಗಣಪತಿ ಶಾಸ್ತಿçಗಳು, ತಮ್ಮ ದೊಡ್ಡತಂದೆಯವರಾದ ಕುರಿಯ ವಿಠಲ ಶಾಸ್ತ್ರಿಗಳ ಶಿಷ್ಯರಾಗಿ ಪ್ರಸಿದ್ಧ ವೇಷಧಾರಿಯಾಗಿದ್ದವರು. ಅಗರಿ ಶ್ರೀನಿವಾಸ ಭಾಗವತರ ಪ್ರೇರಣೆಯೊಂದಿಗೆ ಭಾಗವತಿಕೆ ಕ್ಷೇತ್ರವನ್ನು ಪ್ರವೇಶಿಸಿದರು.
ಕಟೀಲು ಮೇಳದಲ್ಲಿ ಪ್ರದಾನ ಭಾಗವತರಾಗಿ ಮೂರು ದಶಕಗಳ ವ್ಯವಸಾಯದ ಅವಧಿಯಲ್ಲಿ ನೆಡ್ಲೆ ನರಸಿಂಹ ಭಟ್, ಮರವಂತೆ ನರಸಿಂಹದಾಸ, ಪಡ್ರೆ ಚಂದ್ರು, ಕೇದಗಡಿ ಗುಡ್ಡಪ್ಪ ಗೌಡ, ಮುದುಕುಂಜ ವಾಸುದೇವ ಪ್ರಭು, ಕುಡಾಣ ಗೋಪಾಲ ಭಟ್, ಕೋಡಿ ಕುಷ್ಠ ಗಾಣಿಗ, ಪುಂಡರಿಕಾಕ್ಷ ಉಪಾಧ್ಯಾಯ, ಗೇರುಕಟ್ಟೆ ಗಂಗಯ್ಯ ಶೆಟ್ಟಿ ಮುಂತಾದ ಹಿರಿಯ ಕಲಾವಿದರೊಂದಿಗೆ ಒಡನಾಟದ ಅನುಭವವನ್ನು ಹೊಂದಿದ್ದಾರೆ.
ಮೇ ೧೧, ೨೦೨೨ ಬುಧವಾರ ಪೂರ್ವಾಹ್ನ ೧೧.೦೦ ಗಂಟೆಗೆ ಪಲಿಮಾರಿನಲ್ಲಿ ಜರಗುವ ಶ್ರೀ ವಿದ್ಯಾಮಾನ್ಯತೀರ್ಥರ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ’ವನ್ನು ಪ್ರಶಸ್ತಿ ಫಲಕ ಮತ್ತು ರೂ. ೫೦,೦೦೦ ನಿಧಿಯೊಂದಿಗೆ ಪ್ರದಾನ ಮಾಡಲಾಗುವುದು ಎಂದು ಪಲಿಮಾರು ಮಠದ ದಿವಾನರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈದುಲ್ ಫಿತ್ರ್ : ಕಾಪು ಮುಸ್ಲಿಮ್ ಒಕ್ಕೂಟದಿಂದ ಸೌಹಾರ್ದತೆಯ ಸಂದೇಶದೊಂದಿಗೆ ಸಿಹಿ ತಿಂಡಿ ಹಂಚಿಕೆ – Vishwanews24
