ಉಡುಪಿ : ಕೊರೋನಾ ವೈರಸ್ ತಡೆಗೆ ಮುಂಜಾಗ್ರತಾ ಕ್ರಮ : ಜಿಲ್ಲೆಯಾದ್ಯಂತ 144 ಸೆಕ್ಷನ್ ನಿಷೇಧಾಜ್ಞೆ ಜಾರಿ -Vishwanews24
ಉಡುಪಿ : ಕೊರೋನಾ ವೈರಸ್ ತಡೆಗೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಈ ಮೂಲಕ ಕೊರೋನಾ ವೈರಸ್ ಸೋಂಕು ಜಿಲ್ಲೆಯಲ್ಲಿ ಹರಡದಂತೆ ಮುನ್ನೆಚ್ಚರಿಕಾ ಕ್ರಮವನ್ನು ಜಿಲ್ಲಾಧಿಕಾರಿ ಜಗದೀಶ್ ಕೈಗೊಂಡು, ಆದೇಶ ಹೊರಡಿಸಿದ್ದಾರೆ.
ಉಡುಪಿಯಲ್ಲಿ ಕೊರೊನಾ ವೈರಸ್ ಸೋಂಕಿನ ಶಂಕಿತ ಪ್ರಕರಣಗಳು ದಿನೇ ದಿನೇ ಹೆಚ್ಚು ವರದಿಯಾಗುತ್ತಿವೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಂಡಿರುವ ಜಿಲ್ಲಾಢಳಿತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು, ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲೆಯಲ್ಲಿ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಜಿಲ್ಲೆಯ ಬೀಜ್, ಪ್ರವಾಸಿತಾಣಗಳಿಗೆ ಪ್ರವಾಸಿಗ ಭೇಟಿಗೆ ನಿರ್ಬಂಧ ವಿಧಿಸಲಾಗಿದೆ. ಪೂಜೆ, ವಿಶೇಷ ಸೇವೆಗಳಿಗೆ ಅವಕಾಶ ಇಲ್ಲ. ಜನರ ಆರೋಗ್ಯದ ಹಿತದೃಷ್ಠಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದು ಕೊರೋನಾ ತಡೆಗೆ ಮುಂಜಾಗ್ರತಾ ಕ್ರಮ ಎಂಬುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.
