ಉಡುಪಿ: ಖ್ಯಾತ ಹುಲಿವೇಷಧಾರಿ ಅಶೋಕ್ ರಾಜ್ ಕಾಡಬೆಟ್ಟು ನಿಧನ – vishwanews24

Featured, ಉಡುಪಿ

ಉಡುಪಿ: ಖ್ಯಾತ ಹುಲಿವೇಷಧಾರಿ ಅಶೋಕ್ ರಾಜ್ ಕಾಡಬೆಟ್ಟು ನಿಧನ

ಉಡುಪಿ: ಖ್ಯಾತ ಹುಲಿವೇಷಧಾರಿ ಅಶೋಕ್ ರಾಜ್ ಕಾಡಬೆಟ್ಟು ಅವರು ಗುರುವಾರ ಸಂಜೆ ಉಡುಪಿಯ ಖಾಸಗಿ ನಿಧನ ಹೊಂದಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು.

ಕಳೆದ ನವರಾತ್ರಿ ಸಮಯದಲ್ಲಿ ಬೆಂಗಳೂರಿನಲ್ಲಿ ನಡೆದ ಹುಲಿವೇಷ ಕಾರ್ಯಕ್ರಮದಲ್ಲೇ ಕುಸಿದು ಬಿದ್ದಿದ್ದ ಅವರನ್ನು ಬೆಂಗಳೂರಿನಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಂಜೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅವರ ಸಹೋದರ ಹುಲಿ ವೇಷಧಾರಿ ಕಲಾವಿದ ಕಿಶೋರ್ ರಾಜ್ ಕಾಡಬೆಟ್ಟು ತಿಳಿಸಿದ್ದಾರೆ.

ನೂರಾರು ಮಂದಿಗೆ ಹುಲಿವೇಷ ತರಬೇತಿ ನೀಡುತ್ತಿದ್ದ ಅಶೋಕ್ ರಾಜ್ ಕಾಡಬೆಟ್ಟು ಕರಾವಳಿಯೆಲ್ಲೆಡೆ ಜನಪ್ರಿಯರಾಗಿದ್ದರು.

Leave a Reply