ಉಡುಪಿ : ಗೌರಿಹಬ್ಬಕ್ಕೆ ಮುನ್ನ ಜೂನ್, ಜುಲೈ ತಿಂಗಳ ಗೃಹಲಕ್ಷ್ಮೀ ಹಣ ಎಲ್ಲರ ಖಾತೆಗೂ ಸಂದಾಯ : ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

Featured, ಉಡುಪಿ

ಗೌರಿಹಬ್ಬಕ್ಕೆ ಮುನ್ನ ಜೂನ್, ಜುಲೈ ತಿಂಗಳ ಗೃಹಲಕ್ಷ್ಮೀ ಹಣ ಎಲ್ಲರ ಖಾತೆಗೂ ಸಂದಾಯ : ಸಚಿವ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ : ಕೆಲವು ತಾಂತ್ರಿಕ ಕಾರಣಗಳಿಗಾಗಿ ಜೂನ್ ಹಾಗೂ ಜುಲೈ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಈವರೆಗೆ ಬಿಡುಗಡೆಯಾಗಿರಲಿಲ್ಲ. ಜೂನ್ ತಿಂಗಳ ಹಣ ಈಗಾಗಲೇ ಬಿಡುಗಡೆಯಾಗಿದೆ. ಗಣೇಶ-ಗೌರಿ ಹಬ್ಬ ಮೊದಲು ಜೂನ್-ಜುಲೈ ತಿಂಗಳ ಹಣ ಎಲ್ಲರ ಖಾತೆಗೂ ಸಂದಾಯವಾಗಲಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ನಗರದ ಸರ್ವಿಸ್ ಬಸ್ ನಿಲ್ದಾಣದ ಬಳಿ ಪೊಲೀಸ್ ಇಲಾಖೆಯ ಸಿಸಿಟಿವಿಯ ಶ್ಯೇನ ದೃಷ್ಟಿ ಕೇಂದ್ರಕ್ಕೆ ಚಾಲನೆ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡುತಿದ್ದರು.

ಈವರೆಗೆ ಗೃಹಲಕ್ಷ್ಮಿ ಯೋಜನೆಯ ಜೂನ್ ಹಾಗೂ ಜುಲೈ ತಿಂಗಳ ಹಣ ಬಿಡುಗಡೆಯಾಗಿರಲಿಲ್ಲ. ಈಗ ಆ ಹಣವನ್ನ ಬಿಡುಗಡೆ ಮಾಡಿ ಉಡುಪಿಗೆ ಬಂದಿದ್ದೇನೆ. ಹಣ ಬಿಡುಗಡೆಯಾಗಿ ಸರಿಸುಮಾರು ಐದಾರು ದಿನಗಳಾಗಿವೆ. ಜೂನ್ ತಿಂಗಳಿನ ಬಾಕಿ ಹಣ ಸಂದಾಯವಾಗಿದೆ. ಜುಲೈ ಹಣ ಕೆಲವೇ ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಬರಲಿದೆ. ಮುಂದಿನ ಗಣೇಶ ಚತುರ್ಥಿಯ ಒಳಗೆ ಗೃಹಲಕ್ಷ್ಮಿಯ ಜುಲೈ ತಿಂಗಳ ಹಣ ಬಿಡುಗಡೆ ಮಾಡಬೇಕೆನ್ನುವ ಆಸೆ ಇದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

Leave a Reply