ಉಡುಪಿ: ಗ್ರಾಮೀಣ ಬ್ಯಾಂಕುಗಳಲ್ಲಿ ಆಫೀಸ್ ಅಸಿಸ್ಟೆಂಟ್, ಆಫೀಸರ್ ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಲು ಜೂನ್ 27 ಕೊನೆಯ ದಿನ – Vishwanews24
ಉಡುಪಿ: ಗ್ರಾಮೀಣ ಬ್ಯಾಂಕುಗಳಲ್ಲಿ ಆಫೀಸ್ ಅಸಿಸ್ಟೆಂಟ್, ಆಫೀಸರ್ ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಲು ಜೂನ್ 27 ಕೊನೆಯ ದಿನ
ಉಡುಪಿ: ಐಬಿಪಿಸ್ ಮುಖಂತಾರ ದೇಶದ 43 ಗ್ರಾಮೀಣ ಬ್ಯಾಂಕುಗಳಲ್ಲಿ 8106 ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇದೆ ಜೂನ್ 27 ಕೊನೆಯ ದಿನವಾಗಿದೆ.
ರಾಜ್ಯದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಹಾಗು ಕರ್ನಾಟಕ ಗ್ರಾಮೀಣ ಬ್ಯಾಂಕುಗಳಲ್ಲಿ ಸೇರಿ 832 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಇದರಲ್ಲಿ 173 ಆಫೀಸ್ ಅಸಿಸ್ಟೆಂಟ್, 429-ಆಫೀಸರ್ ಸ್ಕೇಲ್-1, 230 ಆಫಿಸರ್ ಸ್ಕೇಲ್ –2 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಪೂರ್ವಭಾವಿ ಪರೀಕ್ಷೆ ಆಗಸ್ಟ್ ನಲ್ಲಿ ಹಾಗು ಮುಖ್ಯ ಪರೀಕ್ಷೆ ಸೆಪ್ಟೆಂಬರ್/ಅಕ್ಟೋಬರ್ ನಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಕೇಂದ್ರ ಸರಕಾರದ ವಿಶೇಷ ಆದೇಶದ ಪ್ರಕಾರ ರಾಜ್ಯದ ಅಭ್ಯರ್ಥಿಗಳು ಕನ್ನಡ, ಕೊಂಕಣಿ, ಹಿಂದಿ ಹಾಗು ಇಂಗ್ಲೀಷಿನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿ ಕೊಡಲಾಗಿದೆ ಎಂದು ಐಬಿಪಿಎಸ್ ತಿಳಿಸಿದೆ.
ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ 850 ರೂ. ಹಾಗು ಎಸ್ಸಿ /ಎಸ್ಟಿ /ವಿಶೇಷ ಚೇತನರು/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 175 ರೂ ನಿಗದಿ ಪಡಿಸಲಾಗಿದೆ. ಬ್ಯಾಂಕ ಸೇವಾ ಶುಲ್ಕ ಮತ್ತು ಇಂಟಿಮೇಷನ್ ಫೀ ಪ್ರತ್ಯೇಕವಾಗಿ ಪಾವತಿಸಬೇಕಾಗುತ್ತದೆ. ಆನ್ಲೈನ್ ಮುಖಾಂತರ ಮಾತ್ರ ಅರ್ಜಿ ಸಲ್ಲಿಸಲಿ ಅವಕಾಶ ಕಲ್ಪಿಸಲಾಗಿದ್ದು ಆಸಕ್ತ ಪದವೀಧರ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಲು https://www.ibps.in/ ಲಿಂಕ್ ಮೂಲಕ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಿ ಜಿಲ್ಲೆಯ ಹೆಚ್ಚಿನ ಪದವೀಧರರು ಬ್ಯಾಂಕ್ ಹುದ್ದೆಗಳಿಗೆ ನೇಮಕಾತಿಗೊಳ್ಳುವ ಸದವಕಾಶವನ್ನು ಪಡೆಯಬೇಕೆಂದು ಲೀಡ್ ಬ್ಯಾಂಕ್, ಉಡುಪಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಐಬಿಪಿಸ್ ನ ಅಧಿಕೃತ ವೆಬಸೈಟ್ https://www.ibps.in/ ಮೂಲಕ ಪಡೆಯಲು ತಿಳಿಸಲಾಗಿದೆ.
