ಉಡುಪಿ :ಜ. 8 ಮತ್ತು 9 ರಂದು ರಾಜ್ಯಮಟ್ಟದ ಗ್ರಾಮೀಣ ಕಂಬಳ ಕ್ರೀಡಾಕೂಟ – Vishwanews24

Featured, ಉಡುಪಿ

ಉಡುಪಿ :ಜ. 8 ಮತ್ತು 9 ರಂದು ರಾಜ್ಯಮಟ್ಟದ ಗ್ರಾಮೀಣ ಕಂಬಳ ಕ್ರೀಡಾಕೂಟ

ಉಡುಪಿ,: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ, ಮಿಯ್ಯಾರು ಕಂಬಳ ಸಮಿತಿ ಹಾಗೂ ನವೋದಯ ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇವರ ಸಹಯೋಗದೊಂದಿಗೆ ರಾಜ್ಯಮಟ್ಟದ ಗ್ರಾಮೀಣ ಕಂಬಳ ಕ್ರೀಡಾಕೂಟ ಮತ್ತು ಲವಕುಶ ಜೋಡುಕೆರೆ ಬಯಲು ಕಂಬಳವು ಜನವರಿ 8 ಮತ್ತು 9 ರಂದು ಮಿಯ್ಯಾರು ಲವಕುಶ ಜೋಡುಕೆರೆ ಬಯಲು ಕಂಬಳದಲ್ಲಿ ನಡೆಯಲಿದೆ.

ಜ. 8 ರಂದು ಸಭಾ ವೇದಿಕೆ ಕಾರ್ಯಕ್ರಮವನ್ನು ರಾಜ್ಯದ ಪ್ರವಾಸೋದ್ಯಮ ಮತ್ತು ಪರಿಸರ ಜೀವಿಶಾಸ್ತç ಇಲಾಖೆ ಸಚಿವ ಆನಂದ್ ಸಿಂಗ್, ಗ್ರಾಮೀಣ ಕಂಬಳವನ್ನು ರಾಜ್ಯದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ನಾರಾಯಣ ಗೌಡ, ಸಭಾ ಕಾರ್ಯಕ್ರಮವನ್ನು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಗಣರಾಜ್ಯೋತ್ಸವ ಪರೇಡ್‍ನಲ್ಲಿ 13 ವರ್ಷಗಳ ಬಳಿಕ ಈ ಬಾರಿ  ಕರ್ನಾಟಕದ ಟ್ಯಾಬ್ಲೋಗಿಲ್ಲ ಅವಕಾಶ – Vishwanews24

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ. ವೈ ರಾಘವೇಂದ್ರ, ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಲಾಲಾಜಿ ಆರ್ ಮೆಂಡನ್, ರಘುಪತಿ ಭಟ್ ಮತ್ತು ಬಿ.ಎಂ ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ದಿ ಮೈಸೂರು ಎಲೆಕ್ಟಿçಕಲ್ ಇಂಡಸ್ಟಿçÃಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಮಂಗಳೂರು ಕ್ಯಾಂಪ್ಕೋ ಲಿಮಿಟೆಡ್ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚಣಿಲ, ಉಡುಪಿ ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಮಿಯ್ಯಾರು ಗ್ರಾಮ ಪಂಚಾಯತ್ ಗಿರೀಶ್ ಆಮೀನ್
ಹಾಗೂ ಮತ್ತಿತರರು ಭಾಗವಹಿಸಲಿರುವರು.

ಉಡುಪಿ : ಬಿಜೆಪಿ ಬೂತ್ ವಿಜಯ ಅಭಿಯಾನ ಜಿಲ್ಲೆಯಾದ್ಯಂತ ಹೊಸ ಸಂಚಲನ ಮೂಡಿಸಿದೆ : ಕುಯಿಲಾಡಿ ಸುರೇಶ್ ನಾಯಕ್  – Vishwanews24

Leave a Reply