ಉಡುಪಿ: ಜಿಲ್ಲೆಯಲ್ಲಿ ಇಂದಿನಿಂದ  ಕೆಎಸ್ಆರ್‌ಟಿಸಿ ಬಸ್ ಸಂಚಾರ ಆರಂಭ – Vishwanews24

Featured, ಉಡುಪಿ

ಉಡುಪಿ: ಜಿಲ್ಲೆಯಲ್ಲಿ ಇಂದಿನಿಂದ  ಕೆಎಸ್ಆರ್‌ಟಿಸಿ ಬಸ್ ಸಂಚಾರ ಆರಂಭ – Vishwanews24

ಉಡುಪಿ : ರಾಜ್ಯ ಸರ್ಕಾರವು ಇಂದಿನಿಂದ ಬಸ್ ಸಂಚಾರಕ್ಕೆ ಅನುವುಮಾಡಿಕೊಟ್ಟಿದ್ದು, ಬರೋಬ್ಬರಿ 54 ದಿನಗಳ ಬಳಿಕ ಉಡುಪಿಯಲ್ಲಿ ಕೆಎಸ್ಆರ್‌ಟಿಸಿ ಬಸ್ ಸಂಚಾರ ಇಂದಿನಿಂದ ಆರಂಭಗೊಂಡಿದೆ.

ಉಡುಪಿ ಕೆಎಸ್ಆರ್‌ಟಿಸಿ ನಿಲ್ದಾಣದಿಂದ ಹುಬ್ಬಳ್ಳಿ, ಬೆಳಗಾವಿ, ಆಗುಂಬೆ, ಶಿವಮೊಗ್ಗ ಬಾಗಲಕೋಟೆ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಗೆ ಸಂಚಾರ ಆರಂಭವಾಗಿದೆ.

ಇನ್ನು ಬಸ್ಸಿನಲ್ಲಿ ಕೇವಲ 50% ಪ್ರಯಾಣಿಕರಿಗೆ ಮಾತ್ರ ಸಂಚರಿಸಲು ಅವಕಾಶ ನೀಡಿದ್ದು, ಬಸ್ ಸಿಬ್ಬಂದಿಗಳು ಇಂದಿನಿಂದ ಕೆಲಸಕ್ಕೆ ಹಾಜರಾಗಿದ್ದಾರೆ.

ಕರ್ನಾಟಕದಲ್ಲಿ ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಬಸ್ ಸಂಚಾರ ಇಂದು ಬೆಳ್ಳಗ್ಗಿನಿಂದ ಆರಂಭಗೊಂಡಿದೆ ಎನ್ನಲಾಗಿದೆ.

ಇನ್ನು ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳು ಇನ್ನೂ ಕೂಡ ಸಂಚಾರ ಪ್ರಾರಂಭಿಸಿಲ್ಲ ಎಂದು ತಿಳಿದು ಬಂದಿದೆ.