ಉಡುಪಿ : ಜಿಲ್ಲೆಯಲ್ಲಿ ಇಂದು 107 ಕೊರೋನ ಪ್ರಕರಣ -Vishwanews24

Featured, ಉಡುಪಿ

ಉಡುಪಿ : ಜಿಲ್ಲೆಯಲ್ಲಿ ಇಂದು 107 ಕೊರೋನ ಪ್ರಕರಣ -Vishwanews24

ಉಡುಪಿ:   ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್ ಪಾಸಿಟಿವ್ ಬಂದವರ ಸಂಖ್ಯೆ 107 ಕ್ಕೆ ಇಳಿದಿದ್ದು  ಓರ್ವ ವೃದ್ಧ ಮಹಿಳೆ ಕೋವಿಡ್‌ನಿಂದ   ಮೃತಪಟ್ಟಿದ್ದಾರೆ.

306 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿದ್ದು, ಸದ್ಯ 2683 ಮಂದಿ ಸಕ್ರಿಯ ಸೋಂಕಿತರು ಜಿಲ್ಲೆಯಲ್ಲಿದ್ದಾರೆ. ಈ ವರೆಗೆ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 363ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 107 ಮಂದಿಯಲ್ಲಿ  ಉಡುಪಿ ತಾಲೂಕಿನ 50, ಕುಂದಾಪುರ ತಾಲೂಕಿನ 39 ಹಾಗೂ ಕಾರ್ಕಳ ತಾಲೂಕಿನ 17 ಮಂದಿ ಇದ್ದು, ಉಳಿದ ಒಬ್ಬರು ಹೊರಜಿಲ್ಲೆಗಳಿಂದ ಬಂದವರು. ಇವರಲ್ಲಿ 10 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 97 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ನಿನ್ನೆ ಒಟ್ಟು 306 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 61461 ಕ್ಕೇರಿದೆ. ಸೋಮವಾರ ಜಿಲ್ಲೆಯಲ್ಲಿ 2096 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 64507 ಆಗಿದೆ ಎಂದು ಡಾ.ಉಡುಪ ತಿಳಿಸಿದ್ದಾರೆ.