ಉಡುಪಿ : ಜಿಲ್ಲೆಯಲ್ಲಿ ಇಂದು 251 ಕೊರೋನಾ ಪ್ರಕರಣ -Vishwanews24

Featured, ಉಡುಪಿ

ಉಡುಪಿ : ಜಿಲ್ಲೆಯಲ್ಲಿ ಇಂದು 251 ಕೊರೋನಾ ಪ್ರಕರಣ -Vishwanews24

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಟ್ಟು 251 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 10704 ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ ಉಡುಪಿಯ 110, ಕುಂದಾಪುರದ 81, ಕಾರ್ಕಳದ 84 ಹಾಗೂ ಇತರೆ ಜಿಲ್ಲೆಗಳ 6 ರೋಗಿಗಳು ಇದ್ದಾರೆ. 64 ಸೋಂಕಿತರಿಗೆ ರೋಗದ ಗುಣಲಕ್ಷಣಗಳು ಕಂಡುಬಂದರೆ 187 ಮಂದಿಗೆ ಲಕ್ಷಣಗಳು ಇಲ್ಲ.

ಬುಧವಾರ 1037 ವರದಿಗಳು ನೆಗೆಟಿವ್ ಬಂದಿದ್ದು, 251 ಪಾಸಿಟಿವ್ ಬಂದಿವೆ. 731 ವರದಿಗಳು ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಬುಧವಾರ 246 ಮಂದಿ ಗುಣಮುಖರಾಗಿದ್ದು ಇದುವರೆಗೂ 7983 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2629 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಜಿಲ್ಲೆಯಲ್ಲಿ ಇದುವರೆಗೆ ಕೊರೋನಾದಿಂದ ಒಟ್ಟು 92ಮಂದಿ ಸಾವನಪ್ಪಿದ್ದಾರೆ