ಉಡುಪಿ : ಜಿಲ್ಲೆಯಲ್ಲಿ ಕೊರೋನಾ ಹೋಗಿದೆ ಎಂಬ ಭಾವನೆ ಬೇಡ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಉಡುಪಿ : ಜಿಲ್ಲೆಯಲ್ಲಿ ಕೊರೋನಾ ಎರಡನೆಯ ಅಲೆ ಇನ್ನೂ ಮುಕ್ತಾಯ ಆಗಿಲ್ಲ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಕೊರೋನಾ ಹೋಗಿದೆ ಎಂಬ ಭಾವನೆ ಬೇಡ…
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಎರಡನೆಯ ಅಲೆ ಇನ್ನೂ ಮುಕ್ತಾಯ ಆಗಿಲ್ಲ,ಜನರಲ್ಲಿ ಕೊರೋನಾ ಹೋಗಿದೆ ಎಂಬ ಭಾವನೆ ಬೇಡ ಎಂದು ಹೇಳಿರುವ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದೇನೆ.ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾಸ್ಕ್ ಇಲ್ಲದವರಿಗೆ ದಂಡ ವಿಧಿಸಲಾಗುವುದು.ಜವಾಬ್ದಾರಿ ಸ್ಥಾನದಲ್ಲಿರುವವರು ಮೊದಲು ಸೂಚನೆ ಅನುಸರಿಸಬೇಕು.ಜನಪ್ರತಿನಿಧಿಗಳು, ಅಧಿಕಾರಿಗಳು ಕೊರೋನಾ ಮಾರ್ಗಸೂಚಿಯನ್ನು ಪಾಲಿಸಿ ಜನಕ್ಕೆ ಮಾದರಿಯಾಗಬೇಕು ಎಂದು ಹೇಳಿದ್ದಾರೆ.
ಸಾರ್ವಜನಿಕರು, ಸಂಘ ಸಂಸ್ಥೆಗಳು ಕೊರೋನ ಮಾರ್ಗಸೂಚಿ ಪಾಲಿಸಬೇಕು.ಉಡುಪಿ ಜಿಲ್ಲೆಯಾದ್ಯಂತ 1ತಿಂಗಳಿನಿಂದ ಪ್ರತಿದಿನ 100 ಪಾಸಿಟಿವ್ ಕೇಸ್ ಬರುತ್ತಿದೆ.ಜಿಲ್ಲೆಯ ಪಾಸಿಟಿವಿಟಿ ರೇಟ್ 3 ಶೇಕಡಾ ಆಸುಪಾಸಿನಲ್ಲಿದೆ.ಎರಡು ಮೂರು ದಿನದಿಂದ ಶೇಕಡಾ 5 ಪಾಸಿಟಿವಿಟಿ ರೇಟ್ ಬರುತ್ತಿದೆ.ಕೇರಳ ಮತ್ತು ಮಹಾರಾಷ್ಟ್ರದ ಜೊತೆ ಉಡುಪಿ ಸಂಪರ್ಕದಲ್ಲಿರುವ ಜಿಲ್ಲೆ.ಪಾಸಿಟಿವ್ ಸಂಖ್ಯೆ ಹೆಚ್ಚಾಗಿದ್ದರೂ ಕಾರ್ಯಕ್ರಮಗಳು ನಡೆಯುತ್ತಿವೆ.ಬೇರೆಬೇರೆ ಕಾರ್ಯಕ್ರಮ ಮಾಡುವವರೇ ಮೂರನೇ ಅಲೆಯ ಆಹ್ವಾನಕ್ಕೆ ಕಾರಣ ಆಗುತ್ತಾರೆ.ಕಾರ್ಯಕ್ರಮ ಮಾಡುವವರಿಂದ ಸಾಮಾನ್ಯ ಜನರ ಜೀವನಕ್ಕೆ ಕಷ್ಟವಾಗಲಿದೆ.ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣದ ಸಂಖ್ಯೆ ಸಾವಿರಕ್ಕೆ ಏರಿಕೆಯಾಗಿದೆ ಎಂದು ಉಡುಪಿ ಡಿ.ಸಿ ಜಿ. ಜಗದೀಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
