ಉಡುಪಿ : ಜಿಲ್ಲೆಯಲ್ಲಿ ಶೇ.100ರಷ್ಟು ಮೊದಲ ಡೋಸ್ ಲಸಿಕೆ ನೀಡಿಕೆ: ಸಚಿವ ಡಾ.ಸುಧಾಕರ್ ಮೆಚ್ಚುಗೆ – Vishwanews24
ಉಡುಪಿ : ಜಿಲ್ಲೆಯಲ್ಲಿ ಶೇ.100ರಷ್ಟು ಮೊದಲ ಡೋಸ್ ಲಸಿಕೆ ನೀಡಿಕೆ: ಸಚಿವ ಡಾ.ಸುಧಾಕರ್ ಮೆಚ್ಚುಗೆ – Vishwanews24
ಉಡುಪಿ ಮೊದಲ ಡೋಸ್ ಲಸಿಕೆ ವಿತರಣೆಯಲ್ಲಿ ಶೇ.100ರಷ್ಟು ಗುರಿ ಸಾಧಿಸಿದ ರಾಜ್ಯದ ಎರಡನೇ ಜಿಲ್ಲೆ ..
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಲಸಿಕೆ ಮೊದಲ ಡೋಸ್ ಶೇ.100 ಮಂದಿಗೆ ಯಶಸ್ವಿಯಾಗಿ ನೀಡಲಾಗಿದೆ. ಆ ಮೂಲಕ ಮೊದಲ ಡೋಸ್ ವಿತರಣೆಯಲ್ಲಿ ಶೇ.100ರಷ್ಟು ಗುರಿ ಸಾಧಿಸಿದ ರಾಜ್ಯದ ಎರಡನೇ ಜಿಲ್ಲೆ ಎಂಬ ಹೆಗ್ಗಳಿಕೆ ಉಡುಪಿ ಪಾತ್ರವಾಗಿದೆ.
ಈ ಬಗ್ಗೆ ಸ್ವತಃ ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟರ್ ಮೂಲಕ ಮಾಹಿತಿ ನೀಡಿದ್ದು, ಯಶಸ್ಸಿಗೆ ಕಾರಣರಾದ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ.

ಜಿಲ್ಲೆಯಲ್ಲಿ 18 ವರ್ಷ ಮೇಲಿನ ಒಟ್ಟು 9,01,568 ಮಂದಿಗೆ ಮೊದಲ ಡೋಸ್‌ನ್ನು ವಿತರಿಸುವ ಗುರಿ ಇದ್ದು, ಇಂದು ಸಂಜೆಯವರೆಗೆ ಒಟ್ಟು 9,08,139 ಮಂದಿಗೆ ಮೊದಲ ಡೋಸ್ ಲಸಿಕೆ ವಿತರಿಸಿ ಗುರಿಮೀರಿದ ಸಾಧನೆ ಮಾಡಲಾಗಿದೆ ಎಂದು ಅವರು ಟ್ವಿಟ್‌ನಲ್ಲಿ ತಿಳಿಸಿದ್ದಾರೆ.
ಕಾಪು: ಮೋದಿಜಿಯವರ ಕಾರ್ಯವೈಖರಿಗೆ ಮನಸೋತು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ – Vishwanews24
