ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

Featured, ಉಡುಪಿ

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ 

ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು ಟಯರ್ ಸ್ಫೋಟಗೊಂಡ ಪರಿಣಾಮ ಮಂಗಳವಾರ ಅಂಬಾಗಿಲು ಜಂಕ್ಷನ್ ಸಮೀಪ ಪಲ್ಟಿಯಾದ ಘಟನೆ ನಡೆದಿದೆ.

ಮಾಹಿತಿಯಂತೆ, ಲಾರಿಯ ಟಯರ್ ಸ್ಫೋಟಗೊಂಡ ಬಳಿಕ ಚಾಲಕನ ನಿಯಂತ್ರಣ ತಪ್ಪಿ ಲಾರಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ಮೀನು ಪೆಟ್ಟಿಗೆಗಳು ರಸ್ತೆಯೆಲ್ಲಾ ಚದುರಿಬಿದ್ದಿದ್ದು, ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.

ಇದನ್ನೂ ಓದಿ :

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಅಪಘಾತದ ಸುದ್ದಿ ತಿಳಿದು ಸ್ಥಳೀಯರು ಹಾಗೂ ವಾಹನ ಸವಾರರು ಸ್ಥಳಕ್ಕೆ ಆಗಮಿಸಿದರು. ಲಾರಿ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲಾರಿಯನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸುವ ಕಾರ್ಯಾಚರಣೆ ಕೈಗೊಂಡರು. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ :

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

Leave a Reply