ಉಡುಪಿ : ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ : ದಂಡ ವಸೂಲಿ -Vishwanews24

Featured

 ಉಡುಪಿ : ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ : ದಂಡ ವಸೂಲಿ -Vishwanews24

 ಉಡುಪಿ : ಜಿಲ್ಲೆಯಲ್ಲಿ ಕೋಟ್ಪಾ 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ, ಗುರುವಾರ ಉಡುಪಿ ತಾಲೂಕಿನ  ಉಡುಪಿ ನಗರ ಬಸ್ ನಿಲ್ದಾಣದ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೇಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ದಾಳಿ ನಡೆಸಿ ಸೆಕ್ಷನ್ 4, 6 (ಎ) ಮತ್ತು 6(ಬಿ) ಅಡಿಯಲ್ಲಿ 22 ಪ್ರಕರಣ ದಾಖಲಿಸಿ 3,000 ರೂ. ದಂಡ ವಸೂಲಿ ಮಾಡಲಾಯಿತು.

ಉಡುಪಿ : ಶಾಸಕರ ಪ್ರದೇಶಾಭಿವೃಧ್ದಿ ಅನುದಾನ ಸಂಪೂರ್ಣವಾಗಿ ಬಳಸಿ: ಸಚಿವ ಡಾ.ಕೆ.ಸಿ. ನಾರಾಯಣಗೌಡ -Vishwanews24

ದಾಳಿಯಲ್ಲಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ್, ಉಡುಪಿ ತಾಲೂಕು ಹಿರಿಯ ಆರೋಗ್ಯ ಸಹಾಯಕ ದೇವಪ್ಪ ಪಟಗಾರ್, ಹಿರಿಯ ಆರೋಗ್ಯ ಸಹಾಯಕ ಜಗದೀಶ್, ರಾಷ್ಟೀಯ ತಂಬಾಕು ನಿಯಂತ್ರಣಾ ಘಟಕದ ವತಿಯಿಂದ, ಎನ್.ಟಿ.ಸಿ.ಪಿ. ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಸಮಾಜಕಾರ್ಯಕರ್ತೆ ಶೈಲಾ ಶಾಮನೂರು, ಉಡುಪಿ ನಗರ ಪೊಲೀಸ್ ಠಾಣೆಯ ಆರಕ್ಷಕರಾದ ರಾಜೇಶ್, ಕಾರ್ತಿಕ್ ಮತ್ತಿತರರು ಉಪಸ್ಥಿತರಿದ್ದರು.

ಉಡುಪಿ :ಗ್ರಾಮೀಣ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ : ಸಚಿವ ಡಾ. ಕೆ ಸಿ ನಾರಾಯಣಗೌಡ -Vishwanews24