ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ -Vishwanews24

Featured, ಉಡುಪಿ

ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ -Vishwanews24

ಉಡುಪಿ : ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಾದ ಬಡಗಬೆಟ್ಟು ಹಾಗೂ ಕೇದಾರ್ ನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್.ಎಸ್.ಎಲ್.ಸಿ ಪಾಸಾದ ಮತ್ತು ಮೂಳೂರು, ಭೈರಂಜೆ, ದುಗ್ಲಿ ಪದವು, ನಿಟ್ಟೂರು, ಬೈಲೂರು, ಆಯುರ್ವೇದಿಕ್ ಆಸ್ಪತ್ರೆ, ಗುಡ್ಡೆಯಂಗಡಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗೆ 9 ನೇ ತರಗತಿ ತೇರ್ಗಡೆಯಾದ, 18 ರಿಂದ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 17 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ http://udupi.nic.in ಅನ್ನು ಸಂಪರ್ಕಿಸುವಂತೆ ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.