ಉಡುಪಿ : ತುರ್ತು ಚಿಕಿತ್ಸೆ – ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಆಸ್ಪತ್ರೆಗೆ ದಾಖಲು  – Vishwanews24

Featured, ಉಡುಪಿ

ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು 

ಉಡುಪಿ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಸಚಿವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆಯೇ ಶಸ್ತ್ರಚಿಕಿತ್ಸೆ ಒಳಗಾಗಿದ್ದು ಇನ್ನೂ 4-5 ದಿನ ವಿಶ್ರಾಂತಿ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ, ತುರ್ತು ಚಿಕಿತ್ಸೆಗಾಗಿ ನಾನು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರ ಸಲಹೆಯಂತೆ 4-5 ದಿನಗಳ ಕಾಲ ಸಾರ್ವಜನಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ಯಾವುದೇ ಕೆಲಸಗಳಿಗಾಗಿ ನನ್ನ ಆಪ್ತ ಸಹಾಯಕರನ್ನು ಮತ್ತು ನನ್ನನ್ನು ದೂರವಾಣಿ ಮೂಲಕ ಸಂಪರ್ಕಿಸಲು ಕೋರುತ್ತೇನೆ ಎಂದು ಹೇಳಿದ್ದಾರೆ.

ನಂಬಿಕೆ ದ್ರೋಹ – ಪ್ರೇಯಸಿಯ ಕತ್ತು ಸೀಳಿ ಕೊಲೆ..⏺️ ಮೃತದೇಹದೊಂದಿಗೆ ವೀಡಿಯೋ ಪೋಸ್ಟ್‌ ಮಾಡಿದ ಪ್ರಿಯಕರ – Vishwanews24

Leave a Reply