ಉಡುಪಿ : ತ್ರಾಸಿ – ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿ ಮುಂದಿನ ಮೂನಾಲ್ಕು ತಿಂಗಳ ಒಳಗಾಗಿ ಪೂರ್ಣ : ಸಚಿವ ಕೆ.ಜೆ ಜಾರ್ಜ್ – vishwanews24
ಉಡುಪಿ : ತ್ರಾಸಿ – ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿ ಮುಂದಿನ ಮೂನಾಲ್ಕು ತಿಂಗಳ ಒಳಗಾಗಿ ಪೂರ್ಣ : ಸಚಿವ ಕೆ.ಜೆ ಜಾರ್ಜ್
ಉಡುಪಿ : ಸಮುದ್ರ ಮತ್ತು ನದಿಯ ನಡುವೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಅಂಚಿನಲ್ಲಿರುವ ತ್ರಾಸಿ ಮತ್ತು ಮರವಂತೆ ಬೀಚ್ನ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ಮೂರ್ನಾಲ್ಕು ತಿಂಗಳ ಒಳಗಾಗಿ ಪೂರ್ಣಗೊಳಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ಇಂಧನ ಇಲಾಖೆ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಅವರು ಇಂದು ತ್ರಾಸಿ ಮರವಂತೆ ಬೀಚ್ಗೆ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡುತ್ತಿದ್ದರು.
ತ್ರಾಸಿ ಬೀಚ್ನಲ್ಲಿ ಪಾರ್ಕಿಂಗ್, ಫುಡ್ಕೋರ್ಟ್, ಸೈಕಲ್ ಟ್ರಾö್ಯಕ್, ಬಯಲು ರಂಗಮ0ದಿರ ಸೇರಿದಂತೆ ಮತ್ತಿತರ ಅಭಿವೃದ್ಧಿ ಕಾಮಗಾರಿಗಳು ಸುಮಾರು 9.95 ಕೋಟಿ ರೂ. ವೆಚ್ಚದಲ್ಲಿ ಕಳೆದ 2 ವರ್ಷದಿಂದ ನಡೆಯುತ್ತಿದ್ದು, ಕಾಮಗಾರಿಗೆ ವೇಗ ನೀಡುವುದರೊಂದಿಗೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದರು.
ಮಂಗಳೂರು ನಗರ ಕಮೀಷನರೇಟ್ ಡಿಸಿಪಿಯಾಗಿ ಸ್ಯಾಮ್ ವರ್ಗಿಸ್ ನೇಮಕ – vishwanews24
ಕರಾವಳಿ ಭಾಗದಲ್ಲಿ ಬೀಚ್ಗಳನ್ನು ಅಭಿವೃದ್ಧಿಗೊಳಿಸಿ, ಕುಡಿಯವ ನೀರು, ಬೆಳಕಿನ ವ್ಯವಸ್ಥೆ, ಸುಸಜ್ಜಿತ ಶೌಚಗೃಹ, ವಾಹನಗಳ ಪಾರ್ಕಿಂಗ್, ಆಸನದ ವ್ಯವಸ್ಥೆ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಪ್ರವಾಸಿಗರಿಗೆ ಕಲ್ಪಿಸಿದ್ದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಇನ್ನಷ್ಟು ಬಲ ದೊರೆತು ಪ್ರವಾಸಿಗರ ಸಂಖ್ಯೆ ಹೆಚ್ಚುವುದರೊಂದಿಗೆ ಸ್ಥಳೀಯ ಉದ್ಯೋಗಾವಕಾಶಗಳಿಗೂ ಉತ್ತೇಜನ ಸಿಗಲಿದೆ. ಇದಕ್ಕೆ ಒತ್ತು ನೀಡಲಾಗುವುದು ಎಂದರು.
ಬೀಚ್ನಿಂದ ಹೋಟೆಲ್ಗೆ ಸಂಪರ್ಕ ಕಲ್ಪಿಸಲು ರಾಷ್ಟಿçÃಯ ಹೆದ್ದಾರಿಯ ಮೇಲ್ಭಾಗದಲ್ಲಿ ಸ್ಕೆöÊವಾಕ್ ನಿರ್ಮಾಣಕ್ಕೆ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಅಭಿಯಂತರರುಗಳೊAದಿಗೆ ಮಾತುಕತೆ ನಡೆಸಲಾಗುವುದು ಎಂದ ಅವರು, ಅಭಿವೃದ್ಧಿ ಕಾಮಗಾರಿಗಳಿಗೆ ಅನಗತ್ಯ ವೆಚ್ಚ ಮಾಡದೇ ಸಾರ್ವಜನಿಕರು ಹಾಗೂ ಪ್ರವಾಸಿಗರ ಅಗತ್ಯಕ್ಕೆ ಅನುಗುಣವಾಗಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.
ರಾ.ಹೆ. ಯಲ್ಲಿ ಸುಮಾರು 1.5 ಕಿ.ಮೀ ಉದ್ದವಿರುವ ತ್ರಾಸಿ ಮತ್ತು ಮರವಂತೆ ಬೀಚ್ನಲ್ಲಿ ತಡೆಬೇಲಿ ಇಲ್ಲದೇ ಇರುವುದರಿಂದ ಪ್ರವಾಸಿಗರು ಹೆದ್ದಾರಿ ಬದಿಗಳಲ್ಲಿ ಎಲ್ಲೆಂದರಲ್ಲಿ ವಾಹನವನ್ನು ನಿಲ್ಲಿಸಿ ಬೀಚ್ಗೆ ಇಳಿಯುತ್ತಾರೆ. ಈ ಬಗ್ಗೆ ನಿಗಾವಹಿಸಲು ಹಾಗೂ ಸುರಕ್ಷತಾ ದೃಷ್ಠಿಯಿಂದ ಸ್ಥಳೀಯ ಜೀವರಕ್ಷಕರನ್ನು ಅಗತ್ಯ ತರಬೇತಿ ನೀಡಿ ನೇಮಕ ಮಾಡಲಾಗುವುದು ಎಂದರು.
ಜಿಲ್ಲೆಯ ಶ್ರೀಕೃಷ್ಣ ಮಠ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸೇರಿದಂತೆ ಹಲವಾರು ಧಾರ್ಮಿಕ ಕ್ರೇತ್ರಗಳಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಹಾಗೂ ಭಕ್ತರು ಆಗಮಿಸುತ್ತಾರೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಿ ವ್ಯವಸ್ಥಿತ ಮೂಲಸೌಕರ್ಯ ಒದಗಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಗೋಪಾಲ ಪೂಜಾರಿ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಮ್.ಎ.ಗಫೂರ್, ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ರಾಮ್ಪ್ರಸಾತ್ ಮನೋಹರ್, ಎಡಿಸಿ ಅಬೀದ್ ಗಧ್ಯಾಳ, ಜಿಲ್ಲಾ ಸಹಾಯಕ ನಿರ್ದೇಶಕಿ ವಿಂಧ್ಯಾ ಎನ್.ಎಮ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು
ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದರೆ ಕಾನೂನು ಕ್ರಮ : ಸಿಎಂ ವಿಜಯ್ ಎಚ್ಚರಿಕೆ – vishwanews24
