ಉಡುಪಿ: ದಿಗ್ವಿಜಯ್ ಸಿಂಗ್ ವಿರುದ್ಧ ದೇಶದ್ರೋಹ ಕೇಸ್ ದಾಖಲಿಸಿ : ಸಂಸದೆ ಶೋಭಾ – Vishwanews24

Featured, ಉಡುಪಿ

ಉಡುಪಿ: ದಿಗ್ವಿಜಯ್ ಸಿಂಗ್ ವಿರುದ್ಧ ದೇಶದ್ರೋಹ ಕೇಸ್ ದಾಖಲಿಸಿ : ಸಂಸದೆ ಶೋಭಾ – Vishwanews24

ಉಡುಪಿ: ಕಾಂಗ್ರೆಸ್ ಯಾವಾಗಲೂ ರಾಷ್ಟ್ರ ವಿರೋಧಿ ಎನ್ನುವುದು ಪದೇ ಪದೆ ಸಾಬೀತಾಗುತ್ತಲೇ ಇದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಶ್ಮೀರದಲ್ಲಿ ಆರ್ಟಿಕಲ್ 370 ಮರುಸ್ಥಾಪಿಸುತ್ತೇವೆ ಎಂದು ಆ ಪಕ್ಷದ ರಾಜ್ಯಸಭೆ ಸದಸ್ಯ ದಿಗ್ವಿಜಯ್ ಸಿಂಗ್ ಹೇಳಿರುವುದು ನಿಜಕ್ಕೂ ಆಘಾತಕಾರಿ ಎಂದು ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಕಾಶ್ಮೀರದಲ್ಲಿ ಎಲ್ಲರೂ ಸಮಾನವಾಗಿ ಬದುಕುವ ಹಕ್ಕನ್ನು ಸ್ಥಾಪಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ರದ್ದು ಮಾಡ್ತೇವೆ ಎನ್ನುವ ಅವರ ಹೇಳಿಕೆ ನಿಜಕ್ಕೂ ಬಾಲಿಶವಾಗಿದ್ದು, ದಿಗ್ವಿಜಯ ಸಿಂಗ್ ಮೇಲೆ ಕೇಂದ್ರ ಸರಕಾರ ದೇಶದ್ರೋಹದಡಿಯಲ್ಲಿ ಕೇಸು ದಾಖಲಿಸಬೇಕು. ಕಾಂಗ್ರೆಸ್ ಪಕ್ಷ ಅವರ ನಿಲುವನ್ನು ಈ ವಿಚಾರದಲ್ಲಿ ಸ್ಪಷ್ಟಪಡಿಸಿ, ದಿಗ್ವಿಜಯ್ ಸಿಂಗ್ ಅವರನ್ನು ಪಕ್ಷದಿಂದಲೇ ಉಚ್ಚಾಟಿಸಬೇಕು ಎಂದು ಆಗ್ರಹಿಸಿದ್ದಾರೆ.