ಉಡುಪಿ: ನಾಡದೋಣಿ ಮೀನುಗಾರರಿಗೆ ಕೇಂದ್ರದಿಂದ ಹೆಚ್ಚುವರಿ 2500 ಕೆಎಲ್ ಸೀಮೆ ಎಣ್ಣೆ ಬಿಡುಗಡೆ :  ಶೋಭಾ ಕರಂದ್ಲಾಜೆ – Vishwanews24

Featured, ಉಡುಪಿ

ಉಡುಪಿ: ನಾಡದೋಣಿ ಮೀನುಗಾರರಿಗೆ ಕೇಂದ್ರದಿಂದ ಹೆಚ್ಚುವರಿ 2500 ಕೆಎಲ್ ಸೀಮೆ ಎಣ್ಣೆ ಬಿಡುಗಡೆ :  ಶೋಭಾ ಕರಂದ್ಲಾಜೆ

ಉಡುಪಿ: 2022-23 ಸಾಲಿನಲ್ಲಿ ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವಾಲಯ ಕರ್ನಾಟಕ ರಾಜ್ಯದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮಿನುಗಾರರಿಗೆ ಒಟ್ಟು 5472 ಕೆ.ಎಲ್. ಸೀಮೆ ಎಣ್ಣೆಯನ್ನು ಹಂಚಿಕೆ ಮಾಡಿತ್ತು. ಅದರಂತೆ ಹಂತಹಂತವಾಗಿ ರಾಜ್ಯದ ಮೀನುಗಾರರ ಸೌಲಭ್ಯಕ್ಕಾಗಿ 2472 ಕೆಎಲ್ ಮತ್ತು 3000 ಕೆಎಲ್. ಸೀಮೆ ಎಣ್ಣೆಯನ್ನು ಬಿಡುಗೊಡೆಗೊಳಿಸಿತ್ತು. ‌ಇಂದು ಪೆಟ್ರೋಲಿಯಂ ಸಚಿವಾಲಯ ಹಂಚಿಕೆ ಗಿಂತಲೂ ಹೆಚ್ಚುವರಿಯಾಗಿ 2500 ಕೆ.ಎಲ್. ಸೀಮೆ ಎಣ್ಣೆಯನ್ನು ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸೌಲಭ್ಯಕ್ಕಾಗಿ ಬಿಡುಗಡೆಗೊಳಿಸಿ ಆದೇಶ ಮಾಡಿದೆ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದೆ ಶೋಭಾ ಕರಂದ್ಲಾಜೆಯವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ 2022-23ರ ಸಾಲಿನ ಅವಧಿಯ ಹಂಚಿಕೆಗಿಂತಲೂ ಹೆಚ್ಚಿನ ಪ್ರಮಾಣದ ಸೀಮೆ ಎಣ್ಣೆಯನ್ನು ರಾಜ್ಯದ ಮೀನುಗಾರರಿಗೆ ಬಿಡುಗಡೆಗೊಳಿಸಿದೆ. ಒಟ್ಟಾರೆಯಾಗಿ 7972 ಕೆ.ಎಲ್. (5472 ಕೆ.ಎಲ್.+2500ಕೆ.ಎಲ್.) ಸೀಮೆ ಎಣ್ಣೆ ಹಂಚಿಕೆಯನ್ನು 2022-23ನೆ ಸಾಲಿನಲ್ಲಿ ರಾಜ್ಯದಕರಾವಳಿ ಮೀನುಗಾರರು ಕೇಂದ್ರ ದಿಂದ ಪಡೆದಿದ್ದಾರೆ.

ಗಣರಾಜೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅನುಮತಿ – Vishwanews24

ಕರಾವಳಿ ಪ್ರದೇಶದ ಮೀನುಗಾರರ ಅಗತ್ಯಕ್ಕೆ ತಕ್ಕಂತೆ ಕೇಂದ್ರ ಸರ್ಕಾರ ಸ್ಪಂದನೆಯನ್ನು ನೀಡಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವರಲ್ಲಿ ಮನವಿಯಲ್ಲಿ ಮಾಡಲಾಗಿತ್ತು. ಕರಾವಳಿ ಪ್ರದೇಶದ ಜೀವನಾಧಾರ ಮೀನುಗಾರಿಕೆ, ಮೀನುಗಾರಿಕೆಯನ್ನ ಬಹುಪಾಲು ಜನರು ನಂಬಿಕೊಂಡು ಜೀವನ ಮಾಡುತ್ತಿದ್ದಾರೆ. ಆದ್ದರಿಂದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ಮೀನುಗಾರರ ಮನವಿಯನ್ನು ಪರಿಗಣಿಸಬೇಕೆಂದು ಒತ್ತಾಯಪೂರ್ವಕವಾಗಿ ಶೋಭಾ ಕರಂದ್ಲಾಜೆಯವರು ಮನಿ ಮಾಡಿದ್ದರು. ಅದರಂತೆ ಕೇಂದ್ರದ ಪೆಟ್ರೋಲಿಯಂ ಸಚಿವರಾದ ಶ್ರೀ ಹರದೀಪ್ ಸಿಂಗ್‌ ಮುರಿಯವರು ಮನವಿಗೆ ಸ್ಪಂದಿಸಿ, ಮೀನುಗಾರರ ಬೇಡಿಕೆಯನ್ನು ಈಡೇರಿಸಿದ್ದಾರೆ. ಹರದೀಪ ಸಿಂಗ್‌ ಪುರಿಯವರಿಗೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಕರಾವಳಿ ಪ್ರದೇಶದ ಸಮಸ್ತ ಮೀನುಗಾರರ ಪರವಾಗಿ ಧನ್ಯವಾದಗಳನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ತಿಳಿಸಿದ್ದಾರೆ.

ರಾಷ್ಟ್ರೀಯ ಯುವಜನೋತ್ಸವ : ಹುಬ್ಬಳ್ಳಿ ಏರ್ ಪೋರ್ಟ್ ಗೆ  ಪ್ರಧಾನಿ ಮೋದಿ ಆಗಮನ – Vishwanews24

Leave a Reply