ಉಡುಪಿ: ನೇಜಾರು ನಾಲ್ವರ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ತಿರಸ್ಕೃತ – vishwanews24
ಉಡುಪಿ: ನೇಜಾರು ನಾಲ್ವರ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ತಿರಸ್ಕೃತ
ಉಡುಪಿ : ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಆದೇಶ ನೀಡಿದೆ.
ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಕೋರಿ ಡಿ.14ರಂದು ಅರ್ಜಿಯನ್ನು ವಕೀಲಕೆ.ಎಸ್.ಎನ್.ರಾಜೇಶ್ ಮೂಲಕ ಸಲ್ಲಿಸಿದ್ದನು. ಇದಕ್ಕೆ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿದ್ದರು.
ಮಂಗಳೂರು- ಮಡಗಾಂವ್ ವಂದೇಭಾರತ್ ಎಕ್ಸಪ್ರೆಸ್ ಗೆ ಪ್ರಧಾನಿ ಮೋದಿ ಚಾಲನೆ – vishwanews24
ಈ ಕುರಿತು ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ದಿನೇಶ್ ಹೆಗ್ಡೆ, ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದರು.
