ಉಡುಪಿ : ನ್ಯಾಯಾಂಗ ಬಂಧನದಿ0ದ ತಪ್ಪಿಸಿಕೊಂಡ ಆರೋಪಿಗೆ ಶಿಕ್ಷೆ -Vishwanews24
ಉಡುಪಿ : ನ್ಯಾಯಾಂಗ ಬಂಧನದಿ0ದ ತಪ್ಪಿಸಿಕೊಂಡ ಆರೋಪಿಗೆ ಶಿಕ್ಷೆ -Vishwanews24
ಉಡುಪಿ : ಮಣಿಪಾಲ ಪೊಲೀಸ್ ಠಾಣೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯಾಗಿದ್ದ ಹನುಮಂತ ಬಸಪ್ಪ ಕಂಬಳಿ ಈತನನ್ನು ೨೦೧೯ ರ ಮಾರ್ಚ್ ತಿಂಗಳಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದ್ದು, ಆತನನ್ನು ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಕರೆದುಕೊಂಡು ಹೋಗುತ್ತಿರುವಾಗ ಜಿಲ್ಲಾ ಕಾರಾಗೃಹದ ಬಳಿ ವಾಹನ ನಿಧಾನವಾದಾಗ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳನ್ನು ದೂಡಿ ಹಾಕಿ ಸ್ಥಳದಿಂದ ಓಡಿ ಹೋಗಿ ನ್ಯಾಯಾಂಗ ಬಂಧನದಿAದ ತಪ್ಪಿಸಿಕೊಂಡ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
E-Cart ಸೌಲಭ್ಯ ಅನುಷ್ಟಾನ – ಅರ್ಜಿ ಆಹ್ವಾನ -Vishwanews24
ಈ ಕುರಿತು ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಕೆ.ಸಿ.ಪೂವಯ್ಯ ಆರೋಪಿಯ ವಿರುದ್ಧ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಈ ಪ್ರಕರಣವು ಉಡುಪಿಯ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಪ್ರಕರಣದಲ್ಲಿ ಸಾಕ್ಷಿತ ಪೂರಕ ಹಾಗೂ ವಾದ ವಿವಾದವನ್ನು ಆಲಿಸಿ ಆರೋಪಿಯ ವಿರುದ್ಧ ಮೇಲಿನ ಪ್ರಕರಣವು ಸಾಬೀತಾಗಿದೆ ಎಂದು ತೀರ್ಮಾನಿಸಿ ನ್ಯಾಯಾಧೀಶ ಇರ್ಫಾನ್ ಅವರು ಆರೋಪಿ ಹನುಮಂತ ಬಸಪ್ಪ ಕಂಬಳಿಗೆ 2 ವರ್ಷಗಳ ಕಾಲ ಶಿಕ್ಷೆ ವಿಧಿಸಿ, ಫೆಬ್ರವರಿ 2 ರಂದು ತೀರ್ಪು ನೀಡಿದ್ದಾರೆ.
ಉಡುಪಿ : ಪರಿಶಿಷ್ಟ ವರ್ಗದ ಜನಾಂಗದವರಿಗೆ ಕುರಿ / ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ -Vishwanews24
ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಬದರೀನಾಥ್ ನಾಯರಿ ಸಾಕ್ಷಿದಾರರನ್ನು ವಿಚಾರಿಸಿ ವಾದ ಮಂಡಿಸಿದ್ದಾರೆ.
