ಉಡುಪಿ: ಪುಷ್ಪಾನಂದ ಫೌಂಡೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ – vishwanews24

Featured, ಉಡುಪಿ

ಉಡುಪಿ: ಪುಷ್ಪಾನಂದ ಫೌಂಡೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ

ಉಡುಪಿ: ಪುಷ್ಪಾನಂದ ಫೌಂಡೇಶನ್ ವತಿಯಿಂದ 2025-2026ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 85% ಕ್ಕಿಂತ ಹೆಚ್ಚು ಅಂಕ ಗಳಿಸಿದ ಉಡುಪಿ ವಿಧಾನಸಭಾ ಕ್ಷೇತ್ರದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಫೌಂಡೇಶನ್‌ನ ಪ್ರವರ್ತಕರಾದ ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರದ ಉಡುಪಿ ನಗರಸಭೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾರ್ಥಿಗಳು ಈ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರತಿಗಳು ಉಡುಪಿಯ “ಸ್ವರಾಷ್ಟ್ರ ಸೇವಾ” ಶಾಸಕರ ಕಚೇರಿ ಹಾಗೂ ಬ್ರಹ್ಮಾವರ ತಾಲೂಕು ಕಚೇರಿಯ ಶಾಸಕರ ಕಾರ್ಯಾಲಯದಲ್ಲಿ ಲಭ್ಯವಿವೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಯೆಲ್ಲೋ ಅಲರ್ಟ್ ಘೋಷಣೆ – vishwanews24

ಅರ್ಜಿ ಸಲ್ಲಿಕೆಗೆ ಆಗಸ್ಟ್ 31 2026 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ 9901190402, 9611817725, ಮತ್ತು 9019566366 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಯಶ್‌ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply