ಉಡುಪಿ : ಪ್ರೋತ್ಸಾಹಧನ : ಅರ್ಜಿ ಆಹ್ವಾನ – Vishwanews24
ಉಡುಪಿ : ಪ್ರೋತ್ಸಾಹಧನ : ಅರ್ಜಿ ಆಹ್ವಾನ – Vishwanews24
ಉಡುಪಿ, : ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಜಿಲ್ಲೆಯಲ್ಲಿ 2021-22 ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾದ ಆದಿವಾಸಿ ಜನಾಂಗದ ಕೊರಗ ವಿದ್ಯಾರ್ಥಿಗಳಿಂದ 5000 ರೂ. ವಿಶೇಷ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574814, 2950198 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮೇ.29 ರಂದು ಬಂಟಕಲ್ ಇಂಜಿನಿಯರಿ0ಗ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ – Vishwanews24
