ಉಡುಪಿ : ಫೆ. 24 ರಂದು6 ನೇ ತರಗತಿ ಪ್ರವೇಶ ಪರೀಕ್ಷೆ – ನಿಷೇಧಾಜ್ಞೆ ಜಾರಿ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24
ಉಡುಪಿ : ಫೆ. 24 ರಂದು6 ನೇ ತರಗತಿ ಪ್ರವೇಶ ಪರೀಕ್ಷೆ – ನಿಷೇಧಾಜ್ಞೆ ಜಾರಿ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24
ಉಡುಪಿ : ಕರ್ನಾಟಕದ ವಸತಿ ಶಾಲೆಗಳಲ್ಲಿ / ಸಂಸ್ಥೆಗಳಲ್ಲಿ 2020 ನೇ ಸಾಲಿನ 6 ನೇ ತರಗತಿಗೆ ದಾಖಲಾತಿ ಪಡೆಯಲು ಪ್ರವೇಶ ಪರೀಕ್ಷೆಯು ಜಿಲ್ಲೆಯಲ್ಲಿ ಫೆಬ್ರವರಿ 24 ರಂದು ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಉಡುಪಿ ಸರ್ವಿಸ್ ಬಸ್ ಸ್ಟಾಂಡ್ ಬಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ
ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.
ಈ ನಿಷೇಧಾಜ್ಞೆ ಆದೇಶವು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲೂ ಫೆ. 24 ರಂದು ಬೆಳಗ್ಗೆ 8 ಗಂಟೆಯಿ0ದ ಸಂಜೆ 6 ರ ವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
